ತಾಲೂಕಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಯತ್ನ

ಕಡೂರು: ತಾಲೂಕಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಶಾಸಕನಾಗಿ ಸದನದಲ್ಲಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನವನ್ನು ಪ್ರಮಾಣಿಕವಾಗಿ ಮಾಡಿದ್ದೇನೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ಪ್ರಗತಿಯಲ್ಲಿರುವ ಭದ್ರಾಉಪಕಣಿವೆ ಯೋಜನೆಯ ಮೂರನೇ ಹಂತದ ಯೋಜನೆ ಡಿಪಿಆರ್ ಸಿದ್ದಗೊಂಡಿದ್ದು, ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಈ ಕಾಮಗಾರಿ ಪೂರ್ಣವಾದರೆ ಬರದ ನಾಡಿಗೆ ಸಂಜೀವಿನಿಯಾಗಲಿದೆ. ಯೋಜನೆಯನ್ನು ನಬಾರ್ಡ್ ಲೆಕ್ಕಶೀರ್ಷಿಕೆಗೆ ಸೇರಿಸಲು ಮನವಿ ಮಾಡಲಾಗಿದೆ. ಉಪಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ನಬಾರ್ಡ್ ಯೋಜನೆಗೆ ಸೇರ್ಪಡೆಯಾಗುವ ಆಶಾಭಾವನೆಯಿದೆ ಎಂದರು.
ಕಡೂರಿನಲ್ಲಿ ಪಾರಂಪರಿಕವಾಗಿ ಕಲ್ಲು ಒಡೆಯುವ ವೃತ್ತಿ ಮಾಡುವವರಿಗೆ ಕಲ್ಲು ಗಣಿ ಗುತ್ತಿಗೆ ನೀಡುವ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿದ್ದು, ಮುಖ್ಯಮಂತ್ರಿಗಳಿಂದಲೂ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ. ಕುವೆಂಪು ವಿವಿ ಸ್ನಾತಕೋತ್ತರ ಕೇಂದ್ರದ ಸಮಗ್ರ ಅಭಿವೃದ್ದಿ, ಇ-ಸ್ವತ್ತು ನೀಡುವಲ್ಲಿ ಇರುವ ಸಮಸ್ಯೆಗಳು, ಪಶು ಇಲಾಖೆಯಲ್ಲಿ ಡಿ ದರ್ಜೆ ನೌಕರರ ತೊಂದರೆಗಳು ಮತ್ತು ಪಶುವೈದ್ಯರ ಕೊರತೆ, ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್‌ಗಳಿಂದ ರೈತರಿಗೆ ಸಿಗಬೇಕಾದ ಸಾಲದ ಸೌಲಭ್ಯ ದೊರಕದೆ ಸಮಸ್ಯೆ ಎದುರಿಸುತ್ತಿರುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿಲಾಗಿದೆ ಎಂದರು.
ಮುಡಾ ಅಥವಾ ವಾಲ್ಮೀಕಿ ಅಭಿವೃದ್ಧಿ ನಿಗಮದ ವಿಚಾರ ತನಿಖೆ ನಡೆಯುತ್ತಲಿದ್ದು ಸತ್ಯಾಂಶ ಹೊರಬರುತ್ತದೆ. ಆದರೆ ವಿರೋಧ ಪಕ್ಷದವರು ಮುಖ್ಯಮಂತ್ರಿ ಅವರ ಹೆಸರಿಗೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಅದು ಲಿಸುವುದಿಲ್ಲ ಎಂದರು.

Share This Article

ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips

ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…