20.4 C
Bengaluru
Sunday, January 19, 2020

ಟಿಎಸ್ಸಾರ್ ಪ್ರಶಸ್ತಿ ಪ್ರಕಟ: ಮುತಾಲಿಕ್ ದೇಸಾಯಿ ಮತ್ತು ಡಿ.ಮಹದೇವಪ್ಪಗೆ ಪ್ರತಿಷ್ಠಿತ ಪ್ರಶಸ್ತಿ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಬೆಂಗಳೂರು: ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದವರಿಗೆ ನೀಡುವ ಪ್ರತಿಷ್ಠಿತ ಟಿಎಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆಯನ್ನು ಹುಟ್ಟುಹಾಕಿ ಬೆಳೆಸಿದವರಿಗೆ ನೀಡುವ ವಿಶೇಷ ಗೌರವದ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

ಅದರಂತೆ, 2017 ನೇ ದಿನದರ್ಶಿ ವರ್ಷದ ಟಿಎಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿಯು ಸಂಯುಕ್ತ ಕರ್ನಾಟಕ ಹಾಗೂ ಕರ್ಮವೀರ ಪತ್ರಿಕೆಯ ನಿವೃತ್ತ ಸಂಪಾದಕ ಧೃವರಾಜ್ ವೆಂಕಟರಾವ್ ಮುತಾಲಿಕ್ ದೇಸಾಯಿ ಅವರಿಗೆ ದೊರೆತಿದೆ. 2018 ನೇ ದಿನದರ್ಶಿ ವರ್ಷದ ಇದೇ ಪ್ರಶಸ್ತಿಯು ಮೈಸೂರಿನ ಕನ್ನಡಿಗರ ಪ್ರಜಾನುಡಿ ಪತ್ರಿಕೆ ಸಂಪಾದಕ ಡಿ ಮಹಾದೇವಪ್ಪ ಅವರಿಗೆ ಲಭಿಸಿದೆ.

ಹಾಗೆಯೇ, 2017 ನೇ ದಿನದರ್ಶಿ ವರ್ಷದ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ತುಮಕೂರು ಪ್ರಾದೇಶಿಕ ಪತ್ರಿಕೆಯ ಸಂಪಾದಕ ಎಸ್. ನಾಗಣ್ಣ ಹಾಗೂ 2018 ನೇ ದಿನದರ್ಶಿ ವರ್ಷದ ಇದೇ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ಸಂಪಾದಕ ಡಾ ಯು.ಪಿ. ಶಿವಾನಂದ ಭಾಜನರಾಗಿದ್ದಾರೆ.

ತಲಾ ಎರಡು ಲಕ್ಷ ರೂ ನಗದು, ಸ್ಮರಣಿಕೆ ಹಾಗೂ ಫಲ-ತಾಂಬೂಲ ಒಳಗೊಂಡ ಈ ಪ್ರಶಸ್ತಿಗಳಿಗೆ ಕರ್ನಾಟಕ ಉಚ್ಛ ನ್ಯಾಯಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಶ್ರೀ ಡಿ.ವಿ. ಶೈಲೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ಆಯ್ಕೆ ಸಮಿತಿ ರಚಿಸಿತ್ತು. ಜನವರಿ ಮೊದಲ ವಾರದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಅಲ್ಲದೇ, 2016 ನೇ ದಿನದರ್ಶಿ ವರ್ಷದ ಟಿಎಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ಪ್ರಜಾವಾಣಿ ಪತ್ರಿಕೆಯ ನಿವೃತ್ತ ಸಹ ಸಂಪದಾಕ ನಾಗೇಶ್ ಹೆಗಡೆ ಹಾಗೂ ಮೊಹರೆ ಹನುಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಮುಂಜಾವು ದಿನ ಪತ್ರಿಕೆಯ ಸಂಪಾದಕ ಗಂಗಾಧರ ಹಿರೇಗುತ್ತಿ ಅವರಿಗೂ ಕೂಡಾ ತಲಾ ಎರಡು ಲಕ್ಷ ರೂ. ನಗದು ಒಳಗೊಂಡ ಈ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಪ್ರದಾನ ಮಾಡಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...