More

    ಘಾಟಿ ಮಾರ್ಗದ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ನೋ ಎಂಟ್ರಿ!

    ರಸ್ತೆ ತಡೆದು ಮಕ್ಕಳ ಪ್ರತಿಭಟನೆ

    ವಿಶೇಷ ದಿನಗಳಲ್ಲಿ ಬಸ್ ಹತ್ತಲು ಹರಸಾಹಸ

    ವಿಜಯವಾಣಿ ಸುದ್ದಿಜಾಲ ಬೆಂ.ಗ್ರಾಮಾಂತರ/ತೂಬಗೆರೆ
    ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿಯ ಘಾಟಿ ಮಾರ್ಗದಲ್ಲಿ ಸಂಚರಿಸುವ ಬಸ್‌ಗಳಲ್ಲಿ ಪ್ರಯಾಣಿಕರು ಕಿಕ್ಕಿರಿದು ತುಂಬುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಬಸ್ ಹತ್ತಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
    ಶಕ್ತಿ ಯೋಜನೆ ಬಳಿಕ ಮಹಿಳಾ ಪ್ರಯಾಣಿಕರು ತಾಲೂಕಿನ ಪ್ರಸಿದ್ಧ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲು ಮುಗಿಬೀಳುತ್ತಿದ್ದು, ಬಸ್‌ಗಳಲ್ಲಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ಸಂಕಷ್ಟ ತಂದೊಡ್ಡಿದೆ. ಅದರಲ್ಲೂ ವಿಶೇಷ ದಿನಗಳಲ್ಲಿ ಬಸ್‌ಗಳಲ್ಲಿ ಮಹಿಳಾ ಭಕ್ತರು ತುಂಬಿತುಳುಕುತ್ತಿದ್ದು, ಬೆಳಗ್ಗೆ ಹಾಗೂ ಸಂಜೆ ವೇಳೆ ಶಾಲಾ ಕಾಲೇಜುಗಳಿಗೆ ಹೋಗಿ ಬರುವ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಜಾಗ ಸಿಗದೆ ಖಾಸಗಿ ವಾಹನಗಳ ಮೊರೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ.
    ಮೇಲೀನ ಜೋಗನಹಳ್ಳಿಯಿಂದ ಘಾಟಿ ಮಾರ್ಗವಾಗಿ ದೊಡ್ಡಬಳ್ಳಾಪುರಕ್ಕೆ ಸಾಗುವ ಸರ್ಕಾರಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರು ತುಂಬುತ್ತಿರುವುದರಿಂದ ಪಾಲ್‌ಪಾಲ್ ದಿನ್ನೆ ಗ್ರಾಮದ ವಿದ್ಯಾರ್ಥಿಗಳು ಬಸ್‌ನಲ್ಲಿ ಜಾಗವಿಲ್ಲದೆ ಶಾಲಾ ಕಾಲೇಜುಗಳಿಗೆ ಹೋಗುವುದು ಕಷ್ಟಸಾಧ್ಯ ಎನ್ನುವ ಸನ್ನಿವೇಶ ಏರ್ಪಟ್ಟಿದೆ. ಹಲವು ವಿದ್ಯಾರ್ಥಿಗಳು ನಡೆದುಕೊಂಡೋ ಅಥವಾ ಖಾಸಗಿ ವಾಹನದಲ್ಲಿಯೋ ಹೋಗುವ ದುಸ್ಥಿತಿ ಎದುರಾಗಿದೆ. ಇದರಿಂದ ಶಿಕ್ಷಣದ ಪ್ರಗತಿಗೆ ತೊಂದರೆ ಎದುರಾಗಿದೆ ಎಂದು ಸ್ಥಳೀಯರಿಂದ ಆಕ್ರೋಶ ಕೇಳಿಬರುತ್ತಿದೆ.
    ಮಂಗಳವಾರ ಬಂತೆಂದರೆ ಕಷ್ಟ: ಶಕ್ತಿ ಯೋಜನೆ ಜಾರಿಯಾದ ಬಳಿಕ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವುದು ಸಾಮಾನ್ಯವಾಗಿದೆ. ಅದೇ ರೀತಿ ತಾಲೂಕಿನ ಪ್ರಸಿದ್ಧ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುವವರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ. ಅದರಲ್ಲೂ ಮಂಗಳವಾರ ಘಾಟಿ ದರ್ಶನಕ್ಕೆ ವಿಶೇಷ ಎನ್ನುವ ಕಾರಣಕ್ಕೆ ಉಳಿದ ದಿನಕ್ಕಿಂತ ದುಪ್ಪಟ್ಟು ಭಕ್ತರು ಆಗಮಿಸುತ್ತಿರುವುದರಿಂದ ಈ ಮಾರ್ಗದಲ್ಲಿ ಸಾಗುವ ಬಸ್‌ಗಳನ್ನು ಹತ್ತಲು ವಿದ್ಯಾರ್ಥಿಗಳಿಗೆ ಸ್ಥಳಾವಕಾಶವೇ ಇಲ್ಲದಂತಾಗಿದೆ.

    ಬಸ್ ತಡೆದು ವಿದ್ಯಾರ್ಥಿಗಳ ಆಕ್ರೋಶ: ಶಕ್ತಿ ಯೋಜನೆ ಜಾರಿಯಾದ ಬಳಿಕ ದೊಡ್ಡಬಳ್ಳಾಪುರ ತಾಲೂಕಿನ ಹಲವು ಕಡೆಗಳಲ್ಲಿ ವಿದ್ಯಾರ್ಥಿಗಳು ಆಗಾಗ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ. ಅದೇ ರೀತಿ ಮಂಗಳವಾರ ಆಕ್ರೋಶಗೊಂಡ ವಿದ್ಯಾರ್ಥಿಗಳು ಪಾಲ್‌ಪಾಲ್‌ದಿನ್ನೆ ಬಳಿ ಸರ್ಕಾರಿ ಬಸ್ ತಡೆದು ಆಕ್ರೋಶ ಹೊರಹಾಕಿದರು. ಕಾಲೇಜಿಗೆ ಹೋಗುವ ಸಮಯದಲ್ಲಾದರೂ ಹೆಚ್ಚುವರಿ ಬಸ್ ಸೌಕರ್ಯ ಕಲ್ಪಿಸಬೇಕು ಎಂದು ೋಷಣೆ ಕೂಗಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts