More

    ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿ

    ವಿಜಯವಾಣಿ ಸುದ್ದಿಜಾಲ ತೂಬಗೆರೆ
    ರಕ್ತದ ಅನಿವಾರ್ಯತೆ ಮತ್ತು ಮಹತ್ವ ಅರಿತು ಆರೋಗ್ಯವಂತ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು ಎಂದು ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು ಹೇಳಿದರು.
    ತೂಬಗೆರೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಜಿಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.
    ಯುವಕರ ರಕ್ತವನ್ನು ಕೃತಕವಾಗಿ ಸೃಷ್ಟಿಸುವುದಕ್ಕಾಗುವುದಿಲ್ಲ. ಆದ್ದರಿಂದ ರಕ್ತಕ್ಕೆ ಪರ್ಯಾಯ ಯಾವುದೂ ಇಲ್ಲ. ಇತ್ತೀಚಿಗೆ ಅಪಘಾತಗಳು ಸಂಭವಿಸಿದಾಗ ರಕ್ತಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜಾಗತಿಕಮಟ್ಟದಲ್ಲಿ ರಕ್ತದ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ರಕ್ತದಾನದ ಕುರಿತು ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಎಂದರು.
    ಡಾ.ಪೂರ್ಣಿಮಾ ಮಾತನಾಡಿ, ರಕ್ತದಾನದಿಂದ ಆಗುವ ಪ್ರಯೋಜನಗಳು ಮತ್ತು ದಾನದಿಂದ ಶೇಖರಣೆಯಾಗುವ ರಕ್ತದ ಸದುಪಯೋಗಗಳನ್ನು ಸಾರ್ವಜನಿಕರಿಗೆ ತಿಳಿಸಬೇಕಾಗಿದೆ ಎಂದರು.
    15 ಯೂನಿಟ್ ರಕ್ತದಾನ ಮಾಡಿದರು. ತೂಬಗೆರೆ ಗ್ರಾಪಂ ಉಪಾಧ್ಯಕ್ಷೆ ವರಲಕ್ಷ್ಮೀ ಕೃಷ್ಣಮೂರ್ತಿ, ಮುನಿಕೃಷ್ಣಪ್ಪ, ಗ್ರಾಪಂ ಅಭಿವೃದ್ಧಿ ಅಧಿಕಾರಿ ವೆಂಕಟೇಶ್, ಗ್ರಾಪಂ ಮಾಜಿ ಅಧ್ಯಕ್ಷ ಟಿ.ವಿ.ವೆಂಕಟೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts