More

    ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ ಕೇವಲ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರೋ ಹುಲಿ ಪತ್ತೆ ಹಚ್ಚಿ

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (ಆಪ್ಟಿಕಲ್​ ಇಲ್ಯೂಶನ್​) ಎಂದು ಕರೆಯುತ್ತೇವೆ.

    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತಾಗಿದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ ಕೇವಲ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರೋ ಹುಲಿ ಪತ್ತೆ ಹಚ್ಚಿ

    ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ಹಿಮದಿಂದ ಆವೃತ್ತವಾಗಿರುವ ಅರಣ್ಯ ಪ್ರದೇಶವನ್ನು ನೀವು ನೋಡಬಹುದು. ಫೋಟೋದಲ್ಲಿ ಒಂದು ಭಾಗದಲ್ಲಿ ಹುಲಿಯೊಂದು ಕುಳಿತಿದೆ. ಆದರೆ, ಹುಲಿಯನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಸೂಕ್ಷ್ಮವಾಗಿ ಗಮನಿಸಿದರೆ, ಹುಲಿ ಇರುವುದು ಗೊತ್ತಾಗುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಹುಲಿಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    ಸೆಕೆಂಡ್​ ಸಮಯದಲ್ಲಿ ನೀವು ಹುಲಿಯನ್ನು ಫೋಟೋದಲ್ಲಿ ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಹುಲಿಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ ಕೇವಲ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರೋ ಹುಲಿ ಪತ್ತೆ ಹಚ್ಚಿ

    ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣ: ಸರ್ಕಾರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಂಧನ

    ಚಿತ್ರ ಬಿಡುಗಡೆ ಬೆನ್ನಲ್ಲೇ ಕೋಟಿ ಗಳಿಕೆ​ ಪೋಸ್ಟ್​: ಮಲಯಾಳಂ ಇಂಡಸ್ಟ್ರಿಗೆ IT ಶಾಕ್​, 225 ಕೋಟಿ ರೂ. ಕಪ್ಪುಹಣ ಪತ್ತೆ

    10 ಕ್ಷೇತ್ರದಿಂದ ಶ್ರೀರಾಮ ಸೇನೆ ಕಾರ್ಯಕರ್ತರು ಚುನಾವಣೆಗೆ ನಿಲ್ಲುತ್ತಾರೆ; ನಾನು ಗೆದ್ದರೂ ಬೆಂಬಲಿಸುವುದೇ ಬಿಜೆಪಿಯನ್ನೇ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts