More

    ಅಯಲನ್ಸ್ ದುರಂತ ತನಿಖೆ: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

    ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಚಂಡಮಾರುತಕ್ಕೆ ಸಿಲುಕಿದ ಅಲಯನ್ಸ್ ಟಗ್ ಬೋಟ್ ದುರಂತ ಪ್ರಕರಣಕ್ಕೆ ಸಂಬಂಧಿಸಿ ಸಂಪೂರ್ಣ ತನಿಖೆಗೆ ಕಂದಾಯ ಸಚಿವ ಆರ್.ಅಶೋಕ್ ಆದೇಶ ನೀಡಿದ್ದಾರೆ.

    ದ.ಕ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲು ಸೂಚಿಸಲಾಗಿದ್ದು, ಯಾವ ಕಾರಣದಿಂದ ದುರ್ಘಟನೆ ಸಂಭವಿಸಿದೆ ಹಾಗೂ ಯಾರಿಂದಾಗಿ ಈ ಅನಾಹುತ ಉಂಟಾಗಿದೆ ಎನ್ನುವ ಬಗ್ಗೆ ಆಯೋಗ ತನಿಖೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಸಚಿವರು ಹೇಳಿದ್ದಾರೆ.

    ಎನ್‌ಎಂಪಿಟಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಸಭೆ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅಶೋಕ್, ಟಗ್ ಬೋಟ್ ದುರಂತ ಬಗ್ಗೆ ಸಂಬಂಧಪಟ್ಟ ಕಂಪನಿಗಳು ಆರೋಪ-ಪ್ರತ್ಯಾರೋಪ ಮಾಡುತ್ತಿವೆ. ಸತ್ಯಾಂಶ ಅರಿಯಲು ತನಖೆಗೆ ಆದೇಶಿಸಲಾಗಿದೆ. ತನಿಖಾ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ. ಬೋಟ್ ದುರಂತ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ ಎಂಆರ್‌ಪಿಎಲ್‌ನಿಂದ ತಲಾ 10 ಲಕ್ಷ ರೂ. ಪರಿಹಾರ ನೀಡಲು ಸೂಚಿಸಲಾಗಿದೆ. ಮುಳುಗಡೆಯಾದ ಬೋಟ್‌ನಲ್ಲಿರುವ 20 ಸಾವಿರ ಲೀಟರ್ ಡೀಸೆಲ್ ತಕ್ಷಣ ಹೊರತೆಗೆದು ಸಮುದ್ರದ ನೀರು ಕಲುಷಿತ ಆಗದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ ಎಂದರು.

    ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್‌ಕುಮಾರ್ ಕಟೀಲ್, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಮೊದಲಾದವರಿದ್ದರು.

    87 ಮನೆಗಳಿಗೆ ಹಾನಿ: ದ.ಕ.ಜಿಲ್ಲೆಯಲ್ಲಿ 87 ಮನೆಗಳಿಗೆ ಹಾನಿಯಾಗಿದ್ದು, ಈ ಪೈಕಿ 63 ಭಾಗಶಃ ಹಾಗೂ 24 ಮನೆಗಳಿಗೆ ಪೂರ್ಣ ಹಾನಿಯಾಗಿದೆ ಎಂದು ಸಚಿವ ಅಶೋಕ್ ತಿಳಿಸಿದರು. 6 ಕಾಳಜಿ ಕೇಂದ್ರಗಳಲ್ಲಿ 168 ಮಂದಿ ಆಶ್ರಯ ಪಡೆದಿದ್ದಾರೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts