More

    ರಾಜ್ಯದಲ್ಲಿ ತುಘಲಕ್ ದರ್ಬಾರ್: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಟೀಕೆ

    ಬೆಂಗಳೂರು: ದೇಶದಲ್ಲಿ ಪ್ರಧಾನಿ ಮೋದಿ ಏಕಮುಖ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದಿಂದ ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದು ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

    ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಮೋದಿ ಯಾರ ಜತೆಗೂ ಚರ್ಚೆ ಮಾಡುವುದಿಲ್ಲ. ಹೀಗಾಗಿ ದೇಶದಲ್ಲಿ ಕರೊನಾ ಸೋಂಕು ವ್ಯಾಪಕವಾಗಿದೆ ಎಂದು ಆರೋಪಿಸಿದರು.

    ವಿಮಾನಗಳ ಹಾರಾಟ ಮೊದಲೇ ರದ್ದು ಮಾಡಿದ್ದರೆ ಸೋಂಕು ಭಾರಿ ಪ್ರಮಾಣದಲ್ಲಿ ಹಬ್ಬುತ್ತಿರಲಿಲ್ಲ. ಈಗ ತಪ್ಪು ಮುಚ್ವಿಕೊಳ್ಳಲು ಬೇರೆಯವರ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆದಿದೆ. ನರೇಗಾಗೆ ಹೆಚ್ಚಿನ ಹಣ ನೀಡಿದ್ದು ಬಿಟ್ಟರೆ ಕೇಂದ್ರ ಪ್ಯಾಕೇಜ್‌ನಿಂದ ಯಾರಿಗೂ ಏನೂ ಪ್ರಯೋಜನವಿಲ್ಲ ಎಂದು ಅಭಿಪ್ರಾಯಪಟ್ಟರು.

    ಇದನ್ನೂ ಓದಿ   ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಯಾವ ದಿನ ಯಾವ ವಿಷಯ ನೋಡಿ​ಕೊಳ್ಳಿ

    ಇಲ್ಲಿ ರಾಜ್ಯ ಸರ್ಕಾರವೂ ನಮ್ಮ ಸಲಹೆ, ಸೂಚನೆ, ಬೇಡಿಕೆಗಳಿಗೆ ಸ್ಪಂದಿಸಿಲ್ಲ. ಪ್ಯಾಕೇಜ್ ಘೋಷಣೆ ಮಾಡಿದ್ದರೂ ಈವರೆಗೆ ಯಾರಿಗೂ ಹಣ ಬಂದಿಲ್ಲ. ಪ್ಯಾಕೇಜ್ ಹೆಸರಲ್ಲಿ ಪ್ರಧಾನಿ ಹಾಗೂ ಸಿಎಂ ಬುರುಡೆ ಬಿಡುತ್ತಿದ್ದಾರೆ. ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.

    ಪಂಚಾಯಿತಿಗಳಿಗೆ ಚುನಾವಣೆ ನಡೆಸದೆ ಬಿಜೆಪಿ ಕಾರ್ಯಕರ್ತರನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವ ಹುನ್ನಾರ ನಡೆದಿದೆ. ಈಗಿರುವ ಸದಸ್ಯರನ್ನು ಮುಂದುವರಿಸಿ ಆರು ತಿಂಗಳ ಬಳಿಕ ಚುನಾವಣೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು ಎಂದರು.

    ಮೊಮ್ಮಗಳು ಬ್ಯಾಂಕಿಗೆ ಹಾಜರು; ಅಜ್ಜಿಯ ಹಣೆ ಮೇಲೆ ಬೆವರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts