ತುಕಾಲಿ ಸಂತೋಷ್​ ಕಾರು ಅಪಘಾತ ಪ್ರಕರಣ: ಚಿಕಿತ್ಸೆ ಫಲಿಸದೇ ಆಟೋ ಚಾಲಕ ಸಾವು

ತುಮಕೂರು: ಬಿಗ್​ಬಾಸ್​ ಸೀಸನ್​ 10ರ ಸ್ಪರ್ಧಿ ಹಾಗೂ ಹಾಸ್ಯ ನಟ ತುಕಾಲಿ ಸಂತೋಷ್​ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಜಗದೀಶ್ (44) ಮೃತ ದುರ್ದೈವಿ. ಈತ ಕುಣಿಗಲ್ ತಾಲ್ಲೂಕಿನ ಕೋಡಿಹಳ್ಳಿ ಪಾಳ್ಯದ ನಿವಾಸಿ. ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ. ನಿನ್ನೆ ರಾತ್ರಿ ಹೊನ್ನೆನಹಳ್ಳಿ ಬಳಿ ತುಕಾಲಿ ಸಂತೋಷ್ ಕಾರು ಹಾಗೂ ಆಟೋ ನಡುವೆ ಅಪಘಾತ ನಡೆದಿತ್ತು. ಜಗದೀಶ್​ಗೆ ಗಾಯವಾಗಿತ್ತು. ಕೂಡಲೇ ಆತನನ್ನು ಕುಣಿಗಲ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. … Continue reading ತುಕಾಲಿ ಸಂತೋಷ್​ ಕಾರು ಅಪಘಾತ ಪ್ರಕರಣ: ಚಿಕಿತ್ಸೆ ಫಲಿಸದೇ ಆಟೋ ಚಾಲಕ ಸಾವು