ವಿದ್ಯಾರ್ಥಿನಿ ನಿಲಯ ಸರ್ಕಾರಿ ಅನುದಾನದಲ್ಲಿ ಅಭಿವೃದ್ಧಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಮಾಹಿತಿ

New Project (4)
Published on

ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ

ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯವನ್ನು ಸರ್ಕಾರದ ಅನುದಾನದಿಂದ ಅಭಿವೃದ್ಧಿಪಡಿಸಲಾಗುವುದು ಎಂದು ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಹೇಳಿದರು.

ಸುಬ್ರಹ್ಮಣ್ಯದ ಬಿಸಿಎಂ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ನೀಡಿದರು.

ಕೇವಲ 100 ವಿದ್ಯಾರ್ಥಿಗಳಿಗೆ ಇರುವ ವಸತಿ ನಿಲಯವನ್ನು 250 ವಿದ್ಯಾರ್ಥಿಗಳ ವಾಸ್ತವ್ಯಕ್ಕೆ ಅನುಕೂಲವಾಗುವಂತೆ ಪ್ಲಾೃನ್ ಆ್ಯಂಡ್ ಎಸ್ಟಿಮೇಶನ್ ಮಾಡಿ ಕಳುಹಿಸುವಂತೆ ತಾಲೂಕು ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಶ್ರಮ ಶಾಲೆಗೆ ಭೇಟಿ: ವಾಲ್ಮೀಕಿ ಆಶ್ರಮ ಶಾಲೆಗೆ ತೆರಳಿ ಅಲ್ಲಿನ ಹೊಸ ಕಟ್ಟಡ ವೀಕ್ಷಿಸಿ, ಜುಲೈ ತಿಂಗಳೊಳಗೆ ತೆರೆಯುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್, ತಹಸೀಲ್ದಾರ್ ಪ್ರಭಾಕರ ಕಜೋರೆ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಲೋಕೋಪಯೋಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗೋಪಾಲ್, ಶ್ರೀಕಾಂತ್, ಸಹಾಯಕ ಇಂಜಿನಿಯರ್ ಪ್ರಮೋದ್ ಕುಮಾರ್, ಹಿಂದುಳಿದ ಬಿಸಿಎಂ ಪುತ್ತೂರು ಅಧಿಕಾರಿ ಗಂಗಯ್ಯ ನಾಯಕ್, ಬಿಸಿಎಂ ಸುಳ್ಯ ಅಧಿಕಾರಿ ಗೀತಾ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ವಲಯ ಅರಣ್ಯಾಧಿಕಾರಿ ವಿಮಲ್ ಬಾಬು, ಕಡಬ ಕಂದಾಯ ಅಧಿಕಾರಿ ಪೃಥ್ವೀರಾಜ್, ಗ್ರಾಮಾಧಿಕಾರಿ ರವಿಚಂದ್ರ, ಪಿಡಿಒ ಮಹೇಶ್, ಕಾರ್ಯದರ್ಶಿ ಮೋನಪ್ಪ ಡಿ., ತಾಲೂಕು ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಮೊದಲಾದವರಿದ್ದರು.

ಸಮಗ್ರ ಪರಿಶೀಲನೆ

ಕುಕ್ಕೆ ಸುಬ್ರಹ್ಮಣ್ಯ ಕಾಶಿ ಕಟ್ಟೆ ಬಳಿ ಇರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿ ಬೆಳಗ್ಗೆ ಉಪಹಾರ ಸೇವಿಸಿದರು. ವಿದ್ಯಾರ್ಥಿನಿಯರೊಂದಿಗೆ ಮಾತನಾಡಿ, ಗುಣಮಟ್ಟದ ಆಹಾರ ಬಗ್ಗೆ, ನೀರಿನ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ಕಂಪ್ಯೂಟರ್ ಕೊಠಡಿ, ಅಡುಗೆ ಕೋಣೆ, ಓದುವ ಕೋಣೆ, ಶೌಚಗೃಹ ಇತ್ಯಾದಿಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿನಿಯರಾದ ಸುಶ್ಮಿತಾ, ಮೌನಾ, ಸಾಕ್ಷಿ, ಮೌಲ್ಯಾ ಹಾಗೂ ಜೀವಿತಾ ವಿವರಗಳನ್ನು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net