More

    ಮೂಡಿಗೆರೆಯಲ್ಲಿ ನಾಡಿದ್ದು ತುಳು ವೈಭವೋ

    ಮೂಡಿಗೆರೆ: ಮಲೆನಾಡಿನಲ್ಲಿರುವ ತುಳು ಭಾಷಿಗರ 15ನೇ ವರ್ಷದ ತುಳು ವೈಭವೋ ಕಾರ್ಯಕ್ರಮವನ್ನು ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಫೆ.23ರಂದು ಸಂಜೆ 5 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ತುಳುಕೂಟದ ಅಧ್ಯಕ್ಷ ವಿನೋದ್‌ಕುಮಾರ್ ಶೆಟ್ಟಿ ಹೇಳಿದರು.

    ಮಂಗಳವಾರ ತುಳು ವೈಭವೋ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಅಂದು ಸಂಜೆ 4 ಗಂಟೆಗೆ ಸ್ಥಳೀಯ ಕಲಾವಿದರಿಂದ ನೃತ್ಯ ಹಾಗೂ ಹಾಸ್ಯ ಕಾರ್ಯಕ್ರಮ, 5 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಅಧ್ಯಕ್ಷತೆಯನ್ನು ಶಾಸಕಿ ನಯನಾ ಮೋಟಮ್ಮ ವಹಿಸಲಿದ್ದಾರೆ. ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಡಾ. ರವೀಶ್ ಪಡುಮಲೆ, ಚಿಕ್ಕಮಗಳೂರು ಸಂತ ಜೋಸೆಫರ ವಿದ್ಯಾವರ್ಧಕ ಸಂಘದ ಸ್ವಾಮಿ ಮಾರ್ಷಲ್ ಪಿಂಟೊ, ಉಲ್ಲಾಳದ ನಿವೃತ್ತ ಪ್ರಾಂಶುಪಾಲ ಟಿ.ಇಸ್ಮಾಹಿಲ್, ಜನಪ್ರತಿನಿಧಿಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು. ನಂತರ ಉಡುಪಿಯ ತುಳುನಾಡ ರತ್ನ ದಿನೇಶ್ ಅತ್ತಾವರ ನಿರ್ದೇಶನದ ಶಾಂಭವಿ ತುಳುನಾಟಕ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.
    ಮಲೆನಾಡಿನ ತುಳು ಭಾಷಿಗರೆಲ್ಲರೂ ಒಂದೆಡೆ ಸೇರಿ ತುಳುಕೂಟ ರಚಿಸಿ 14 ವರ್ಷದಿಂದ ತುಳು ವೈಭವೋ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ತುಳುಕೂಟ ರಚಿಸಿ ಪ್ರತಿ ವರ್ಷ ಸಮಾಜಮುಖಿ ಕೆಲಸ ನಿರ್ವಹಿಸಿಕೊಂಡು ಬರುವ ಮೂಲಕ ಭಾಷೆ ಬೆಳವಣಿಗೆಗೆ ಉತ್ತೇಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಒತ್ತಾಯಿಸುವ ಮೂಲಕ ಯುವ ಜನಾಂಗಕ್ಕೆ ಸಂಸ್ಕಾರದೆಡೆಯಲ್ಲಿ ಸಾಗಿಸಲು ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
    ತುಳುಕೂಟದ ಕಾರ್ಯದರ್ಶಿ ಜೀವನ್ ಕಳಮೆ, ಗೌರವಾಧ್ಯಕ್ಷ ಜಾನ್ ಡಿಸೋಜಾ, ಸಂಚಾಲಕ ವಸಂತ ಪೂಜಾರಿ, ಖಜಾಂಚಿ ವಿಶ್ವಕುಮಾರ್, ಕಾರ್ಯಕ್ರಮದ ನಿರ್ದೇಶಕ ಹಮೀದ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts