More

    ತುಳು ಭಾಷೆಯಲ್ಲಿ ನನ್ನ ಮೊದಲ ಸಿನಿಮಾ ಬಿಡುಗಡೆಯಾಗುತ್ತಿದೆ; ಸಂತಸ ಹಂಚಿಕೊಂಡ ರಿಷಬ್ ಶೆಟ್ಟಿ

    ಬೆಂಗಳೂರು: ಕಾಂತಾರ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದ್ದಂತೆ, ತುಳು ಅವತರಣಿಕೆಯ ಟ್ರೈಲರ್ ಬಿಡುಗಡೆಯಾಗಿತ್ತು. ಈ ವೇಳಿ ಡಿಸೆಂಬರ್ 2ರಂದು ಸಿನಿಮಾ ತುಳು ಭಾಷೆಯಲ್ಲಿ ಬಿಡುಗಡೆಯಾಗುವುದಾಗಿ ಹೊಂಬಾಳೆ ಫಿಲ್ಮ್ಸ್​ ತಿಳಿಸಿತ್ತು. ಇದೀಗ ನಾಳೆಯಿಂದ (ಡಿ.2) ರಾಜ್ಯದಾದ್ಯಂತ ಕಾಂತಾರ ಸಿನಿಮಾ ತುಳು ಭಾಷೆಯಲ್ಲಿ ಪ್ರದರ್ಶನಗೊಳ್ಳಲಿದೆ.

    ಕನ್ನಡ ಭಾಷೆಯಲ್ಲಿ ಮಾತ್ರ ನಿರ್ಮಾಣವಾಗಿದ್ದ ಕಾಂತಾರ ಸಿನಿಮಾ, ನೋಡ ನೋಡುತ್ತಿದ್ದಂತೆಯೇ ಹಿಂದಿ, ಮಲಯಾಳಂ, ತಮಿಳು, ತೆಲುಗು ಭಾಷೆಗೆ ಡಬ್​ ಆಗಿ, ಪ್ಯಾನ್ ಇಂಡಿಯಾ ಸಿನಿಮಾವಾಗಿ ದೊಡ್ಡ ಮಟ್ಟದ ಯಶಸ್ಸು ಸಂಪಾದಿಸಿತ್ತು. ಆದರೆ ತುಳು ಭಾಷೆಯಲ್ಲಿ ಮಾತ್ರ ತೆರೆ ಕಂಡಿರಲಿಲ್ಲ. ಇದೀಗ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದ್ದಂತೆ, ತುಳು ಭಾಷೆಯಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ.

    ಈ ಬಗ್ಗೆ ಕಾಂತಾರ ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಂತಸ ಹಂಚಿಕೊಂಡಿದ್ದು, ಕಾಂತಾರ ಸಿನಿಮಾ ಯಶಸ್ವಿಯಾಗಲು ಜನರೇ ಕಾರಣ. ಇದಕ್ಕಾಗಿ ಇಡೀ ಚಿತ್ರತಂಡ ಪ್ರೇಕ್ಷಕರಿಗೆ ಋಣಿಯಾಗಿದೆ. ಇದೀಗ ತುಳು ಭಾಷೆಯಲ್ಲಿ ನನ್ನ ಮೊದಲ ಸಿನಿಮಾ ಬಿಡುಗಡೆಯಾಗುತ್ತಿದೆ.

    ಕಾಂತಾರ ಕನ್ನಡದಲ್ಲಿ ಬಿಡುಗಡೆಯಾದಾಗ ಕರಾವಳಿ ಭಾಗದಿಂದ ಈ ಸಿನಿಮಾ ತುಳು ಭಾಷೆಯಲ್ಲಿ ಬರಬೇಕೆಂದು ಸಾಕಷ್ಟು ಜನರು ಇಂಗಿತ ವ್ಯಕ್ತಪಡಿಸಿದ್ದರು ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts