More

    24ರಂದು ಕೊಬ್ಬರಿ ಖರೀದಿ ಕೇಂದ್ರಕ್ಕೆ ಶೋಭಾ ಕರಂದ್ಲಾಜೆ ಚಾಲನೆ

    ತುಮಕೂರು: ಕನಿಷ್ಟ ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ಫೆ.1ರಿಂದ ನೋಂದಣಿ ಆರಂಭವಾಗಲಿದೆಯಾದರೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾಕರಂದ್ಲಾಜೆ ಜ.24ರಂದು ಬೆಳಗ್ಗೆ 11ಕ್ಕೆ ತುಮಕೂರು ಎಪಿಎಂಸಿಯಲ್ಲಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಲಿದ್ದಾರೆ.

    ಕೇಂದ್ರ ಸಚಿವೆ ಕಾರ್ಯಕ್ರಮದ ಬಗ್ಗೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಂಸದ ಜಿ.ಎಸ್.ಬಸವರಾಜು, ಶಾಸಕ ಜಿ.ಬಿ.ಜ್ಯೋತಿಗಣೇಶ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ, ರಾಜ್ಯ ಕಾರ್ಯದರ್ಶಿ ಅಂಬಿಕಾ, ಜಿಲ್ಲಾ ಮಾಧ್ಯಮ ಸಂಯೋಜಕ ಟಿ.ಆರ್.ಸದಾಶಿವಯ್ಯ ಖಚಿತಪಡಿಸಿದರು.

    ಜಿಲ್ಲೆಯಲ್ಲಿ 21 ಕೊಬ್ಬರಿ ಖರೀದಿ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದ್ದು ಸಚಿವೆ ಶೋಭಾ ಕರಂದ್ಲಾಜೆ ತುಮಕೂರು ಎಪಿಎಂಸಿ ಆವರಣದಲ್ಲಿ ಕೊಬ್ಬರಿ ಖರೀದಿ ಕೇಂದ್ರ ಉದ್ಘಾಟಿಸಲಿದ್ದಾರೆ ಎಂದು ಶಾಸಕ ಬಿ.ಸುರೇಶ್‌ಗೌಡ ಹೇಳಿದರು.

    24ರಂದು ಕೊಬ್ಬರಿ ಖರೀದಿ ಕೇಂದ್ರಕ್ಕೆ ಶೋಭಾ ಕರಂದ್ಲಾಜೆ ಚಾಲನೆ

    ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿಸಲು ತುಮಕೂರು ನಗರ, ತಿಪಟೂರು, ಕೊನೇಹಳ್ಳಿ, ಕರಡಾಳು, ತುರುವೇಕೆರೆ, ಗುಬ್ಬಿ, ಚೇಳೂರು, ಕುಣಿಗಲ್, ಸಿರಾ, ಚಿಕ್ಕನಾಯಕನಹಳ್ಳಿ, ಹುಳಿಯಾರಿನಲ್ಲಿ ಖರೀದಿ ಕೇಂದ್ರಗಳು ಆರಂಭವಾಗಲಿವೆ ಎಂದು ತಿಳಿಸಿದರು.

    https://www.vijayavani.net/wp-admin/post.php?post=1948744&action=edit

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts