More

    ಪ್ಲಾಸ್ಟಿಕ್ ಬಾಟಲಿಯಲ್ಲಿ ಮೂಡಿದ `ತುಮಕೂರು’ ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಗೆ

    ತುಮಕೂರು: ಏಕಬಳಕೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಿ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ `ತುಮಕೂರು’ ಎಂಬ ಕಲಾಕೃತಿ ನಿರ್ಮಿಸಿ ಗಿನ್ನೆಸ್ ಬುಕ್ ಆಫ್ ರೆಕಾರ್ಡ್ ಪುಟ ಸೇರಲು ತುಮಕೂರು ನಗರ ಮುನ್ನುಡಿ ಬರೆದಿದೆ.

    ಭಾನುವಾರ ಮಧ್ಯಾಹ್ನ 1ಲಕ್ಷಕ್ಕೂ ಹೆಚ್ಚು ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಿ ತುಮಕೂರು ಎಂಬ ಕನ್ನಡ ಪದದ ಕಲಾಕೃತಿ ನಿರ್ಮಿಸಲಾಗಿದ್ದು ನಗರವನ್ನು ವಿಶ್ವ ದಾಖಲೆಗೆ ಸೇರಿಸುವ ಪ್ರಯತ್ನ ಮಾಡಲಾಯಿತು.

    ಮಹಾನಗರಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಸಾರ್ವಜನಿಕರಲ್ಲಿ ಪ್ಲಾಸ್ಟಿಕ್ ಬಳಕೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ಪ್ರಯತ್ನ ಮಾಡಲಾಯಿತು.

    ಪ್ಲಾಸ್ಟಿಕ್ ಬಾಟಲಿಯಲ್ಲಿ ಮೂಡಿದ `ತುಮಕೂರು' ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಗೆ
    default

    ಕಳೆದ 20 ದಿನಗಳಿಂದ ಪಾಲಿಕೆ ವ್ಯಾಪ್ತಿಯ ಎಲ್ಲ ವಾರ್ಡ್ಗಳ ಮನೆ, ಹೋಟೆಲ್, ರೆಸ್ಟೋರೆಂಟ್, ಫುಡ್‌ಸ್ಟಿçÃಟ್, ಕನ್ವೆನ್ಷನ್ ಹಾಲ್‌ಗಳಿಂದ ಸಂಗ್ರಹಿಸಲಾದ ಏಕಬಳಕೆ ಬಾಟಲಿಗಳನ್ನು ಕಲಾಕೃತಿಗೆ ಬಳಸಲಾಯಿತು.

    ಅರ್ಧ ಲೀ., 1 ಲೀ., 2 ಲೀ., ಬಾಟಲಿಗಳನ್ನು ಪ್ರತ್ಯೇಕಿಸಿ ಸುಮಾರು 5 ಗಂಟೆಯಿAದ 8 ಗಂಟೆಯೊಳಗೆ ಕಲಾಕೃತಿಯನ್ನು ಪಾಲಿಕೆ ಪೌರಕಾರ್ಮಿಕರು ನಿರ್ಮಿಸಿದ್ದು ಲಂಡನ್ ನಿಂದ ಆಗಮಿಸಲಿರುವ ತೀರ್ಪುಗಾರರು ಇದಕ್ಕೆ ಸಾಕ್ಷಿಯಾದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts