

ತುಮಕೂರು: ಮುಂದಿನ ಸಂಸತ್ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ಹೊಣೆಯನ್ನು ನನ್ನ ಮೇಲೆ ಭರವಸೆಯಿಟ್ಟು ರಾಹುಲ್‌ಗಾಂಧಿ ನೀಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಘೋಷಿಸಿದರು.
ಕೊರಟಗೆರೆ ತಾಲೂಕು ಕಾಂಗ್ರೆಸ್ ಕಚೇರಿಯಲ್ಲಿ ಇಂದು ಕಾರ್ಯಕರ್ತರನ್ನು ಉz್ದೆÃಶಿಸಿ ಮಾತನಾಡಿದ ಅವರು, ನಿಮ್ಮ ಪರಮೇಶ್ವರ್ ಮೇಲೆ ಹೈಕಮಾಂಡ್ ಭರವಸೆಯಿಟ್ಟಿದ್ದು ಎಲ್ಲಾ ಕಾರ್ಯಕರ್ತರು, ಮುಖಂಡರು ಜವಬ್ಧಾರಿ ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.
ಕೊರಟಗೆರೆ ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ನನಗೆ ನೀಡಿರುವಷ್ಟು ಲೀಡ್ ಸಾಕಾಗುವುದಿಲ್ಲ, 2014ರಲ್ಲಿ ನಮ್ಮ ಅಭ್ಯರ್ಥಿ ಗೆದ್ದಾಗ 36 ಸಾವಿರ ಲೀಡ್ ಇತ್ತು, 2024ಕ್ಕೆ ಅದಕ್ಕಿಂತಲೂ ಹೆಚ್ಚು ಮತ ನೀಡಬೇಕು ಎಂದು ಮನವಿ ಮಾಡಿದ್ದಾರೆ.