ಮಹಿಳಾ ಸಹೋದ್ಯೋಗಿಯೊಂದಿಗೆ ಅನುಚಿತ ವರ್ತನೆ: ಮುಖ್ಯಪೇದೆ ಅಮಾನತು

ತುಮಕೂರು: ಮಹಿಳಾ ಸಹೋದ್ಯೋಗಿಯೊಂದಿಗೆ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಮುಖ್ಯಪೇದೆ ಸುದರ್ಶನ್​ ಎಂಬುವವರನ್ನು ಅಮಾನತು ಮಾಡಲಾಗಿದೆ.

ತುಮಕೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ದಿವ್ಯಾ ಗೋಪಿನಾಥ್​ ಅವರು ಜಿಲ್ಲೆಯ ಶಿರಾ ನಗರ ಪೊಲೀಸ್ ಠಾಣೆ ಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೇದೆ ಸುದರ್ಶನ್​ನನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಸುದರ್ಶನ್​ ಕಿರುಕುಳ ನೀಡುತ್ತಿರುವ ಕುರಿತು ಮಹಿಳಾ ಪೇದೆ ಶಿರಾ ನಗರ ಪೊಲಿಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಸುದರ್ಶನ್​ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ.