ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ.ಆರ್.ಮಮತಾ ( 47) ಅವರು ಇಂದು ನಿಧನರಾಗಿದ್ದಾರೆ.
ಕಳೆದ ಎರಡು ತಿಂಗಳಿನಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಮಮತಾ ಪ್ರಸಕ್ತ ತುಮಕೂರು ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪತಿ ಹಿರಿಯ ಪತ್ರಕರ್ತ ಎಚ್.ಆರ್.ರವೀಶ್ , ಮಗ ಪ್ರಜ್ವಲ್ ಹಾಗೂ ಅಪಾರ ಬಂಧುಬಾಂಧವರನ್ನು ಅಗಲಿದ್ದಾರೆ.
ಮೃತದೇಹದ ಅಂತ್ಯಕ್ರಿಯೆ ತುಮಕೂರು ತಾಲೂಕು ಹಾಲನೂರು ಗ್ರಾಮದ ತೋಟದಲ್ಲಿ ಆ.3 ಶನಿವಾರ ಮಧ್ಯಾಹ್ನ 12ಕ್ನೆಕೆ ನೆರವೇರಲಿದೆ. ಬೆಂಗಳೂರಿನ ಅವರ ಮನೆಯಲ್ಲಿ ಶುಕ್ರವಾರ ಸಂಜೆ 8ರಿಂದ ಶನಿವಾರ ಬೆಳಗ್ಗೆ 8ರ ವರೆಗೂ ಅಂತಿಮ ದರ್ಶನಕ್ಕೆ ಅವಕಾಶವಿದೆ.