More

    ತುಂಬಿ ಹರಿಯುತ್ತಿವೆ ಕೆರೆಗಳು, ಜಮೀನುಗಳಿಗೆ ನೀರು ನುಗ್ಗಿ ಅವಾಂತರ

    ವಿಜಯವಾಣಿ ಸುದ್ದಿಜಾಲ ಸರ್ಜಾಪುರ
    ಭಾರಿ ಮಳೆಯಿಂದಾಗಿ ಕೆರೆಗಳು ತುಂಬಿ ಹರಿಯುತ್ತಿದ್ದು, ಕೋಡಿ ನೋಡಲು ಜನ ಮುಗಿಬೀಳುತ್ತಿದ್ದಾರೆ. ದೊಮ್ಮಸಂದ್ರ, ಸರ್ಜಾಪುರ, ಮುಗಳೂರು, ಬಿಲ್ಲಾಪುರ, ನೆರಿಗಾ, ಯಮರೆ, ಹಂದೇನಹಳ್ಳಿ ಗ್ರಾಪಂ ವ್ಯಾಪ್ತಿಯ ಬಹುತೇಕ ಕೆರೆಗಳು ಕೋಡಿ ಹರಿಯುತ್ತಿದ್ದು ಜಮೀನುಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.


    ಮಾದಪ್ಪನಹಳ್ಳಿ, ಕೂಗೂರು, ಮುಗಳೂರು, ದೇಶಪಾಂಡೆ ಗುಟ್ಟಹಳ್ಳಿ, ಪಂಡಿತರ ಅಗ್ರಹಾರ, ಮಟ್ಟನಹಳ್ಳಿಯಲ್ಲಿ ಹಾದು ಹೋಗುವ ದಕ್ಷಿಣ ಪಿನಾಕಿನಿ ನದಿ ಉಕ್ಕಿ ಹರಿದು ನೂರಾರು ಎಕರೆ ಜಮೀನು ಜಲಾವೃತವಾಗಿದೆ. ಮಳೆ ನೀರಿನೊಂದಿಗೆ ಮನೆಗಳಿಗೆ ವಿಷಜಂತುಗಳು ಹರಿದು ಬಂದಿದ್ದು ಸಾರ್ವಜನಿಕರು ಆತಂಕಗೊಂಡಿದ್ದಾರೆ.


    ಕಂದಾಯ ಮತ್ತು ಕೃಷಿ ಅಧಿಕಾರಿಗಳು ಪರಿಶೀಲಿಸಿದ್ದು, ಮಳೆಯಿಂದ ತೊಂದರೆಗೊಳಗಾದ ರೈತರಿಗೆ ಪರಿಹಾರ ದೊರಕಿಸುವ ಭರವಸೆ ನೀಡಿದ್ದಾರೆ ಎಂದು ಮುಗಳೂರು ಗ್ರಾಪಂ ಅಧ್ಯಕ್ಷ ಎಂ.ನಾರಾಯಣಸ್ವಾಮಿ ತಿಳಿಸಿದ್ದಾರೆ.


    ಸರ್ಜಾಪುರ ಸುತ್ತಮುತ್ತ ರಾಜಕಾಲುವೆ ಒತ್ತುವರಿ ಹಾಗೂ ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಮಳೆ ನೀರು ಮನೆಗಳಿಗೆ ನುಗ್ಗಿದೆ. ಅಧಿಕಾರಿಗಳು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts