ಸಿಎಂ ಅಮೃತ ನಗರೋತ್ಥಾನ ಯೋಜನೆಯಲ್ಲಿ ಜಿಲ್ಲೆಗೆ 120ಕೋಟಿ ರೂ. ಅನುದಾನ

2555555555555
Published on

ತುಮಕೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ-4ರಲ್ಲಿ ತುಮಕೂರು ಜಿಲ್ಲೆಗೆ 120 ಕೋಟಿ ರೂ.ಅನುದಾನ ಹಂಚಿಕೆಯಾಗಿದ್ದು ಕಾಮಗಾರಿಗಳು ತ್ವರಿತಗತಿಯಲ್ಲಿ ಪೂರ್ಣವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಧಿಕಾರಿಗಳಿಗೆ ಸೂಚಿಸಿದು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ(ಮುನ್ಸಿಪಾಲಿಟಿ)ಯೋಜನೆ (ಹಂತ-4)ಯ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಜಿಲ್ಲೆಯ ಮೂರು ನಗರಸಭೆಗಳಿಗೆ ತಲಾ 30 ಕೋಟಿ, ಪುರಸಭೆಗಳಿಗೆ ತಲಾ 10 ಕೋಟಿ, ಪಟ್ಟಣ ಪಂಚಾಯತಿಗಳಿಗೆ ತಲಾ 5 ಕೋಟಿ ರೂ. ಅನುದಾನ ನೀಡಲಾಗಿದ್ದು ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದೆ, ಬಾಕಿ ಇರುವ ಕಾಮಗಾರಿಗಳ ಅನುಷ್ಟಾನವಾಗಬೇಕು ಎಂದರು.

ಕುಡಿಯುವ ನೀರು, ಒಳಚರಂಡಿ, ರಸ್ತೆ ಅಭಿವೃದ್ಧಿ ಹಾಗೂ ಇನ್ನಿತರೆ ಯೋಜನೆಗಳ ಅಭಿವೃದ್ಧಿಯೇ ನಗರೋತ್ಥಾನ ಯೋಜನೆಯ ಉz್ದೆÃಶವಾಗಿದೆ. ಜಿಲ್ಲೆಯಲ್ಲಿ ವಿಕಲಚೇತನ ಹಾಗೂ ಪೌರಕಾರ್ಮಿಕರಿಗೆ ಅಗತ್ಯವಿರುವ ಶೌಚಾಲಯ, ವಿಶ್ರಾಂತಿ ಗೃಹಗಳ ನಿರ್ಮಾಣಕ್ಕೆ ಕ್ರಮವಹಿಸಬೇಕು ಎಂದರು.

ನವದೆಹಲಿ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಮಾತನಾಡಿ, ಶಿರಾ ತಾಲೂಕಿನಲ್ಲಿ ಬಡವರಿಗಾಗಿ ಕಲ್ಯಾಣ ಮಂಟಪ ಕಟ್ಟಿಸಲು ಸ್ಥಳ ಗುರುತಿಸಲಾಗಿದ್ದು, ಈ ಸಂಬAಧ ವರದಿ ಸಲ್ಲಿಸುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ಎಸ್.ಅನಿಲ್‌ಕುಮಾರ್‌ಗೆ ಸೂಚಿಸಿದರು.

ತಿಪಟೂರು ಶಾಸಕ ಕೆ.ಷಡಾಕ್ಷರಿ ಹಾಗೂ ಪಾವಗಡ ಶಾಸಕ ಎಂ.ವಿ.ವೆAಕಟೇಶ್ ಮಾತನಾಡಿದರು. ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಉಪವಿಭಾಗಾಧಿಕಾರಿ ರಿಷಿ ಆನಂದ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎನ್.ಆಂಜಿನಪ್ಪ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net