ಕಂಗನಾ ವಿರುದ್ಧ ಎಫ್‌ಐಆರ್ ದಾಖಲಿಸಲು ತುಮಕೂರು ಕೋರ್ಟ್ ಆದೇಶ

Kangana
Published on

ತುಮಕೂರು: ಟ್ವಿಟರ್‌ನಲ್ಲಿ ರೈತ ವಿರೋಧಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಕಂಗನಾ ರಣಾವತ್ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸುವಂತೆ ಇಲ್ಲಿನ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.

ನ್ಯಾಯವಾದಿ ಎಲ್. ರಮೇಶ್ ನಾಯಕ್ ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಅವರು ಕ್ಯಾತ್ಸಂದ್ರ ಪೊಲೀಸರಿಗೆ ಈ ನಿರ್ದೇಶನ ನೀಡಿದ್ದಾರೆ. ಸಿಆರ್‌ಪಿಸಿ 156 (3) ಪ್ರಕಾರ ತನಿಖೆ ನಡೆಸುವಂತೆ ದೂರುದಾರರು ಅರ್ಜಿಯಲ್ಲಿ ಕೋರಿದ್ದಾರೆ. ಎಫ್‌ಐಆರ್ ದಾಖಲಿಸುವಂತೆ ಕೋರ್ಟ್ ಆದೇಶ ನೀಡಿದೆ ಎಂಬುದನ್ನು ದೂರುದಾರರು ಖಚಿತಪಡಿಸಿದ್ದಾರೆ. ಕಂಗನಾ ತಮ್ಮ ಟ್ವೀಟ್‌ನಲ್ಲಿ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net