More

    ಅನುದಾನ ಬಳಕೆಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿದೆ : ಸಚಿವ ಡಾ.ನಾರಾಯಣಗೌಡ ಮೆಚ್ಚುಗೆ

    ತುಮಕೂರು : ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಬಳಕೆಯಲ್ಲಿ ಜಿಲ್ಲೆಯಲ್ಲಿ ಉತ್ತಮ ಸಾಧನೆಯಾಗಿದೆ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ಉತ್ಸಾಹದಿಂದ ಹಣ ಬಳಕೆಯಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ.ನಾರಾಯಣಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣಲ್ಲಿ ಮಂಗಳವಾರ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅನುದಾನ ಬಳಕೆ ವಿಚಾರದಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ. ಕೋವಿಡ್‌ನಿಂದ ಲಾಕ್‌ಡೌನ್ ಆಗಿದ್ದರೂ ಕೆಲಸ ವೇಗವಾಗಿ ನಡೆದಿದೆ. ಬಹುತೇಕ ಜಿಲ್ಲೆಗಳಲ್ಲಿ ಅನುದಾನ ಬಳಕೆಯೇ ಆಗಿಲ್ಲ ಎಂದರು.

    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮಹತ್ವವನ್ನು ರಾಜ್ಯಕ್ಕೆ ತೋರಿಸಿಕೊಡುತ್ತೇನೆ. ಹಿಂದೆಂದೂ ಆಗಿರದಂತಹ ಅಭಿವೃದ್ಧಿ ಕಾರ್ಯ ಮಾಡುತ್ತೇನೆ. ಪ್ರತಿ ತಾಲೂಕು, ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ವಾಣ ಮಾಡುತ್ತೇನೆ. ಅದಕ್ಕಾಗಿಯೆ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ವಾಡುತ್ತಿದ್ದೇನೆ ಎಂದರು.

    ತುಮಕೂರಿನಲ್ಲಿ ಸ್ಮಾರ್ಟ್‌ಸಿಟಿ ವತಿಯಿಂದ ಭವ್ಯವಾದ ಕ್ರೀಡಾಂಗಣ ನಿರ್ವಾಣವಾಗುತ್ತಿದೆ, ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಹೈಟೆಕ್ ಆಗಲಿದ್ದು, ಅಲ್ಲಿ ಕಾಮಗಾರಿ ಆರಂಭವಾದಾಗ ತುಮಕೂರಿನ ಕ್ರೀಡಾಂಗಣವನ್ನು ರಾಜ್ಯಮಟ್ಟದ ಕ್ರೀಡಾ ಚಟುವಟಿಕೆಗೆ ಬಳಸಬೇಕು. ಕ್ರೀಡಾ ಇಲಾಖೆ ಅಡಿ ಬಾಕಿ ಇರುವ ಕಾಮಗಾರಿಗಳು ಶ್ರೀ ಮುಗಿಯಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿ ಹೊಸ ಬೆಳೆ ಬೆಳೆಯುತ್ತಿರುವ ಮೂಸಂಬಿ, ಡ್ರಾಗನ್ ಫ್ರೂಟ್ ಬಗ್ಗೆ ವಾಹಿತಿ ಪಡೆದ ಸಚಿವರು, ಬೆಳೆ ವಿಮೆಗೆ ಒತ್ತು ಕೊಡುವಂತೆಯೂ ಹೇಳಿದರು.

    ಅಡಕೆ ಬೆಳೆಯ ಹನಿ ನೀರಾವರಿಗೆ ಸಬ್ಸಿಡಿ ನೀಡುವಂತೆ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಗಮನ ಸೆಳೆದರು, ತುಮಕೂರು ಜಿಲ್ಲೆ ಒಂದು ಕಾಲದಲ್ಲಿ ಕಬ್ಬಡಿ, ಖೋಖೋ ಕ್ರೀಡೆಗೆ ಬಹಳ ಹೆಸರುವಾಸಿಯಾಗಿತ್ತು. ಅದರೆ ಈಗ ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಯೇ ಇಲ್ಲದಂತಾಗಿದೆ. ಹಾಗಾಗಿ ಕ್ರೀಡಾ ಚಟುವಟಿಕೆಗೆ ಒತ್ತು ಕೊಡಬೇಕು ಎಂದರು.

    ಏರ್‌ರೈಫಲ್ ಕೊಡುಗೆ : ಸಮಾಜ ಸೇವಕರಾದ ಎನ್.ಎಸ್.ಜಯಕುವಾರ್, ವಿನಯ್, ರಾಜೇಂದ್ರ ಕೊಡುಗೆಯಾಗಿ ನೀಡಿದ ಒಲಂಪಿಕ್ಸ್ ಸ್ಪರ್ಧೆಯಲ್ಲಿ ಬಳಸುವ ಏರ್‌ರೈಫಲ್ ಅನ್ನು ಸಚಿವ ನಾರಾಯಣಗೌಡ ರಾಷ್ಟ್ರ ಮಟ್ಟದ ರೈಫಲ್ ಶೂಟಿಂಗ್ ಸ್ಫರ್ಧೆಗೆ ಆಯ್ಕೆಯಾಗಿರುವ ಕ್ರೀಡಾಪಟುಗಳಾದ ಕಿರಣ್, ಪ್ರಿಯಾ ಡ್ಯಾನಿಯಲ್‌ಗೆ ಕಂಚಿನಪದಕ ಹಾಗೂ ಶ್ರೀತೇಜ್, ಮನೋಜ್ ಗೌಡ, ರೋಹನಗೌಡ ಅವರಿಗೆ ಏರ್‌ರೈಲ್ ನೀಡಿದರು. ಚೆನ್ನೈನಲ್ಲಿ ನಡೆದ ದಕ್ಷಿಣ ಭಾರತದ ಚಾಂಪಿಯನ್ ಶಿಪ್ ರೈಫಲ್ ಶೂಟಿಂಗ್‌ನಲ್ಲಿ ವಿವೇಕಾನಂದ ರೈಫಲ್ ಅಕಾಡೆಮಿಯ ಕ್ರೀಡಾಪಟುಗಳು ಭಾಗವಹಿಸಿ ಅರ್ಹತಾ ಅಂಕಗಳಲ್ಲಿ ಆಯ್ಕೆಯಾಗಿ ಭೂಪಾಲ್‌ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ರೈಫಲ್ ಶೂಟಿಂಗ್‌ಗೆ ಆಯ್ಕೆಯಾಗಿದ್ದಾರೆ.

    ಶಾಸಕ ಜಿ.ಬಿ.ಜ್ಯೋತಿಗಣೇಶ್, ಎಂ.ವಿ.ವೀರಭದ್ರಯ್ಯ, ಚಿದಾನಂದ ಎಂ.ಗೌಡ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಪಂ ಸಿಇಒ ಡಾ.ಕೆ. ವಿದ್ಯಾಕುವಾರಿ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts