Friday, 14th December 2018  

Vijayavani

ಚಾಮರಾಜನಗರದಲ್ಲಿ ವಿಷವಾದ ಮಾರಮ್ಮನ ಪ್ರಸಾದ- ನಾಲ್ವರ ಸಾವು-40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, ಜಿಲ್ಲಾಧಿಕಾರಿ ಭೇಟಿ        ರಾಜಸ್ಥಾನ ಸಿಎಂ ಆಗಿ ಆಶೋಕ್ ಗೆಹ್ಲೋಟ್, ಯುವ ನಾಯಕ ಸಚಿನ್ ಪೈಲಟ್​​ಗೆ ಡಿಸಿಎಂ ಪಟ್ಟ- ಕಾಂಗ್ರೆಸ್​ನಿಂದ ಅಧಿಕೃತ ಘೋಷಣೆ        ಚೆನ್ನೈನ ರೇಲಾ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​ವೈ- ಸಿಎಂ ಎಚ್​ಡಿಕೆ ಚೆನ್ನೈಗೆ ಪ್ರಯಾಣ        ಭದ್ರತೆಗಾಗಿ ರಫೇಲ್ ಖರೀದಿ-ಸುಪ್ರೀಂಕೋರ್ಟ್ ತೀರ್ಪಿನಿಂದ ಭ್ರಮನಿರಸನ-ರಾಗಾ ವಿರುದ್ಧ ಹಾಲಿ ಮಾಜಿ ರಕ್ಷಣಾ ಸಚಿವರ ಕಿಡಿ        ನಾಲ್ಕು ದಿನದಲ್ಲಿ ಎಲ್ಲ ಸರಿಹೋಗುತ್ತೆ-ಪ್ರಯಾಣಿಕರಿಗೆ ಯಾವುದೇ ಆತಂಕ ಬೇಡ-ಪಿಲ್ಲರ್ ಬಿರುಕಿಗೆ BMRCL ಎಂಡಿ ಸ್ಪಷ್ಟನೆ        ನನಗೂ ಸಚಿವೆಯಾಗುವ ಆಸೆ ಇದೆ- ಅಂತರಂಗ ತೆರೆದಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್- ಕೈ ಸಚಿವಾಕಾಂಕ್ಷಿಗಳ ಪಟ್ಟಿಗೆ ಈಗ ಹೊಸ ಸೇರ್ಪಡೆ       
Breaking News

ಫೇಸ್‌ಬುಕ್‌ ಲೈವ್‌ ಬಂದು ಮದುವೆಯಾದ ಪ್ರೇಮಿಗಳು

Saturday, 11.08.2018, 11:10 AM       No Comments

ತುಮಕೂರು: ಸಾಮಾಜಿಕ ಜಾಲತಾಣಗಳನ್ನು ಇದೀಗ ಹಲವಾರು ಕಾರ್ಯಗಳಿಗೆ ಉಪಯೋಗಿಸಿಕೊಳ್ಳಲಾಗುತ್ತಿದೆ. ಇಷ್ಟುದಿನ ಫೇಸ್​ಬುಕ್​ ಲೈವ್‌ನಲ್ಲಿ ಆತ್ಮಹತ್ಯೆಗೆ ಶರಣಾಗುವ ಘಟನೆಗಳು ನಡೆಯುತ್ತಿದ್ದವು. ಇದೀಗ ಫೇಸ್​ಬುಕ್ ಲೈವ್​ನಲ್ಲಿ ಬಂದು ಪ್ರೇಮಿಗಳು ವಿವಾಹವಾಗಿದ್ದಾರೆ.

ಮಧುಗಿರಿ ನಿವಾಸಿ ಕಿರಣ್(25), ಅಂಜನಾ (19) ಪರಪ್ಪರ ಪ್ರೀತಿಸಿ ವಿವಾಹ ಮಾಡಿಕೊಂಡಿದ್ದಾರೆ.

ಪ್ರೇಮ ವಿವಾಹಕ್ಕೆ ವಧು ಮನೆಯವರ ವಿರೋಧದ ಹಿನ್ನೆಲೆಯಲ್ಲಿ ಫೇಸ್​ಬುಕ್‌ ಲೈವ್‌ ಮಾಡಿ ಮದುವೆ ಮಾಡಿಕೊಂಡಿದ್ದಾರೆ.

ಯುವತಿ ಅಂಜನಾಶ ತಂದೆ ತಿಮ್ಮರಾಜು 2 ದಿನದ ಹಿಂದೆ ಮಗಳು ಕಾಣೆಯಾಗಿದ್ದಾಳೆ ಎಂದು ಮಧುಗಿರಿ ಠಾಣೆಗೆ ದೂರು ನೀಡಿದ್ದರು. ಆದರೆ ಇದೀಗ ಮದುವೆಯಾಗಿರುವ ಜೋಡಿ ನಮ್ಮನ್ನು ಬೇರೆಯಾಗಿಸಲು ಪ್ರಯತ್ನಿಸಿದರೆ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top