ತುಮಕೂರು ಲೋಕಸಭೆಗೆ ಸ್ಪರ್ಧಿಸುವುದಿಲ್ಲ; ರಾಜಕಾರಣದಿಂದ ನಿವೃತ್ತನಾಗಲ್ಲ: ಸೋಮಣ್ಣ

v.somanna
ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ
Published on

ಬೆಂಗಳೂರು:

ತುಮಕೂರು ಲೋಕಸಭೆಯಲ್ಲಿ ಇನ್ನು ಮುಂದೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದೇನೆಯೇ ಹೊರತು, ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ ಎಂದು ಹೇಳಿಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ರಾಜಕೀಯ ಅನುಭವವನ್ನು ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಧಾರೆ ಎರೆಯುವ ಅವಕಾಶವನ್ನು ಅಲ್ಲಿನ ಮತದಾರರು ನೀಡಿದ್ದಾರೆ. ಅದಕ್ಕೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ನನ್ನ ಹೋರಾಟ ಇರಲಿದೆ ಎಂದರು.

ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ಯಾವುದೇ ಕೆಲಸ ವಹಿಸಿದರೂ, ಅದನ್ನು ಮಾಡಲು ಸಿದ್ಧನಿದ್ದೇನೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆ, ಅಮಿತ್ ಷಾ ಅವರು ಇಟ್ಟಿರುವ ವಿಶ್ವಾಸದಿಂದ ಕೇಂದ್ರದಲ್ಲಿ ಇಷ್ಟು ಮಹತ್ವದ ಜವಬ್ದಾರಿಯನ್ನು ನಿಭಾಯಿಸುವ ಅವಕಾಶ ಲಭ್ಯವಾಗಿದೆ. ಈ ಶಕ್ತಿಯನ್ನು ಬಳಸಿಕೊಂಡು ರಾಜ್ಯ ಅಭಿವೃದ್ಧಿಗೆ ನನ್ನದೇ ಆದ ಕಲ್ಪನೆಯಲ್ಲಿ ಕೆಲಸ ಮಾಡಲು ಮುಂದಾಗಿದ್ದೇನೆ ಎಂದರು.

ಟೀಕೆ ಟಿಪ್ಪಣಿ ಮಾಡುವುದರಿಂದ ಕೆಲಸಗಳು ಆಗುವುದಿಲ್ಲ. ನಿಜವಾದ ಕೆಲಸಗಳೇ ಜನರ ನಡುವೆ ಉಳಿಯುತ್ತದೆ. ಆ ಕಾರಣಕ್ಕಾಗಿಯೇ ಬಹುಕಾಲದಿಂದ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳಿಗೆ ಈ ಅವಧಿಯಲ್ಲಿ ಹೆಚ್ಚಿನ ಆದ್ಯತೆ ನೀಡಿ, ಚಾಲನೆ ನೀಡುವ ಕೆಲಸವನ್ನು ಮಾಡುತ್ತಿದ್ದೇನೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net