17.8 C
Bengaluru
Wednesday, January 22, 2020

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ ಪಾಲಿಕೆ ಆಯುಕ್ತ ಟಿ.ಭೂಬಾಲನ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಈಗ ಜೆಎಂಡಿಯನ್ನು ದಿಢೀರ್ ವರ್ಗಾವಣೆ ಮಾಡಿದ್ದು, ಸ್ಮಾರ್ಟ್‌ಸಿಟಿ ಅಕ್ಷರಶಃ ‘ಅನಾಥ’ವಾಗಿದೆ.

ಸ್ಮಾರ್ಟ್‌ಸಿಟಿ ಕಾಮಗಾರಿಗಳಲ್ಲಿನ ಲೋಪ, ಕಳಪೆ ಕಾಮಗಾರಿಗಳ ಬಗ್ಗೆ ಸ್ಮಾರ್ಟ್‌ಸಿಟಿ ಅಧ್ಯಕ್ಷೆ ಶಾಲಿನಿ ರಜನೀಶ್ ಸೇರಿ ಆಡಳಿತ ಮಂಡಳಿ ಬಗ್ಗೆ ಮಾಜಿ ಸಚಿವ ಸೊಗಡುಶಿವಣ್ಣ, ಶಾಸಕ ಜಿ.ಬಿ.ಜ್ಯೋತಿಗಣೇಶ್ ಹಾಗೂ ಮಾಜಿ ಶಾಸಕ ಎಸ್.ರಫೀಕ್ ಅಹ್ಮದ್ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಈಗ ಪ್ರಭಾರ ಎಂಡಿ ಆಗಿದ್ದ ಮತ್ತೊಬ್ಬ ದಕ್ಷ, ತಾಂತ್ರಿಕ ಕೌಶಲ ಹೊಂದಿದ್ದ ಅಧಿಕಾರಿ ವಿ.ಅಜಯ್ ತಲೆದಂಡವಾಗಿದೆ.

ಇದರ ನಡುವೆ ಮುಖ್ಯ ಇಂಜಿನಿಯರ್ ಶಾಂತರಾಜಣ್ಣ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ. ಇಡೀ ಸ್ಮಾರ್ಟ್‌ಸಿಟಿ ಯೋಜನೆಗಳಲ್ಲಿ ಶಾಲಿನಿರಜನೀಶ್ ಅವರ ಸಂಪೂರ್ಣ ‘ಹಸ್ತಕ್ಷೇಪ’ ಇರುವ ಹಿನ್ನೆಲೆಯಲ್ಲಿ ಅವರನ್ನು ಗುರಿಮಾಡಿಕೊಂಡು ಜನಪ್ರತಿನಿಧಿಗಳು ಸ್ಮಾರ್ಟ್‌ಸಿಟಿ ಲೋಪಗಳಿಗೆ ಅವರನ್ನೇ ಹೊಣೆ ಮಾಡಲು ಆಗ್ರಹಿಸಿದ್ದರು. ಆದರೆ, ಈಗ ಜೆಎಂಡಿ ಸ್ಥಾನದಿಂದ ಕೆಎಎಸ್ ಕಿರಿಯಶ್ರೇಣಿ ಅಧಿಕಾರಿ ವಿ.ಅಜಯ್ ಅವರನ್ನು ವಿಮುಕ್ತಿಗೊಳಿಸಿ ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಮಂಜಪ್ಪ ಆದೇಶ ಹೊರಡಿಸಿದ್ದಾರೆ.

ರಂಗಸ್ವಾಮಿಗೆ ಪ್ರಭಾರ: ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಟಿ.ರಂಗಸ್ವಾಮಿ ಅವರನ್ನು ಮತ್ತೆ ಸ್ಮಾರ್ಟ್‌ಸಿಟಿ ಪ್ರಭಾರ ಎಂಡಿ ಆಗಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ನೇಮಿಸಿರುವುದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಭೂಬಾಲನ್ ಬರ್ತಾರಾ ?: ಸ್ಮಾರ್ಟ್‌ಸಿಟಿ ಎಂಡಿ ಆಗಿ ಹೆಚ್ಚುವರಿ ಜವಾಬ್ದಾರಿ ಹೊತ್ತಿಕೊಂಡಿದ್ದ ಪಾಲಿಕೆ ಆಯುಕ್ತರಾಗಿದ್ದ ದಕ್ಷ ಐಎಎಸ್ ಅಧಿಕಾರಿ ಟಿ.ಭೂಬಾಲನ್ ಅವರನ್ನು ಗೋಕಾಕ್ ಉಪಚುನಾವಣೆ ಘೋಷಣೆ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಘಟಪ್ರಭಾ-ಮಲಪ್ರಭಾ ಯೋಜನೆ ವಿಶೇಷ ಜಿಲ್ಲಾಧಿಕಾರಿ (ಭೂಸ್ವಾಧೀನ) ಹುದ್ದೆಗೆ ವರ್ಗಾವಣೆ ಮಾಡಲಾಗಿತ್ತು. ಈವರೆಗೆ ಪಾಲಿಕೆ ಆಯುಕ್ತ ಹಾಗೂ ಸ್ಮಾರ್ಟ್‌ಸಿಟಿ ಎಂಡಿ ಹುದ್ದೆಗೆ ಯಾರೊಬ್ಬರನ್ನೂ ಸರ್ಕಾರ ನೇಮಿಸಿಲ್ಲ. ಈಗಾಗಲೇ ಉಪ ಚುನಾವಣೆ ಫಲಿತಾಂಶ ಸಹ ಪ್ರಕಟಗೊಂಡು ಪ್ರಕ್ರಿಯೆ ಪೂರ್ಣಗೊಂಡಿದ್ದು ಮತ್ತೆ ಭೂಬಾಲನ್ ನಗರಕ್ಕೆ ಮರಳುತ್ತಾರೆಂಬ ನಿರೀಕ್ಷೆ ತುಮಕೂರಿಗರದ್ದಾಗಿದೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...