More

    ಪತ್ನಿಗೆ ಜಿಪಂ ಅಧ್ಯಕ್ಷೆ ಸ್ಥಾನ ಉಳಿಸಿಕೊಡಲು ಕಾಂಗ್ರೆಸ್ ಸೇರಿದ ಜೆಡಿಎಸ್​ ಟಿಕೆಟ್​ ಆಕಾಂಕ್ಷಿ!

    ತುಮಕೂರು: ಶಿರಾ ವಿಧಾನಸಭೆ ಕ್ಷೇತ್ರದ ಉಪಸಮರ ದಿನೇದಿನೆ ರಂಗೇರುತ್ತಿದ್ದು, ಜಿದ್ದಾಜಿದ್ದಿ ಕಣದಲ್ಲಿ ಪಕ್ಷಾಂತರಿಗಳ ಹೈಜಂಪ್​ ಜೋರಾಗಿದೆ.
    ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಜಿಪಂ ಅಧ್ಯಕ್ಷೆ ಎಂ.ಲತಾ ಅವರ ಪತಿ ಜೆಡಿಎಸ್ ಮುಖಂಡ ಕಲ್ಕರೆ ರವಿಕುಮಾರ್​ ಕಾಂಗ್ರೆಸ್​ ಸೇರ್ಪಡೆಯಾಗಿದ್ದು, ಜೆಡಿಎಸ್​ ಪಾಳಯದಲ್ಲಿ ಆತಂಕ ಶುರುವಾಗಿದೆ.

    ರವಿಕುಮಾರ್​ ಪತ್ನಿ ಲತಾ ಜೆಡಿಎಸ್​ನಿಂದ ಜಿಪಂಗೆ ಆಯ್ಕೆಯಾಗಿದ್ದು, ಅಧ್ಯೆಯಾಗಿ ನಾಲ್ಕೂವರೆ ವರ್ಷದಿಂದಲೂ ಅಧಿಕಾರ ಅನುಭವಿಸುತ್ತಿದ್ದಾರೆ. ಈ ನಡುವೆ ಅಧ್ಯಕ್ಷೆ ವಿರುದ್ಧ ಸದಸ್ಯರು ಅವಿಶ್ವಾಸ ಮಂಡಿಸಿದ್ದಾರೆ. ಅ.7ರಂದು ಜಿಪಂ ಅಧ್ಯಕ್ಷೆ ವಿರುದ್ಧ ನಡೆಯಲಿರುವ ಅವಿಶ್ವಾಸ ನಿರ್ಣಯ ಸಭೆಯಲ್ಲಿ ಲತಾ ಅವರನ್ನು ಕಾಂಗ್ರೆಸ್ ಬೆಂಬಲಿಸಲಿದೆ. ಇದಕ್ಕೆ ಪ್ರತಿಯಾಗಿ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರವಿಕುಮಾರ್ ಕಾಂಗ್ರೆಸ್​ಗೆ ಜಿಗಿದಿದ್ದಾರೆ. ಆ ಮೂಲಕ ಜಿಪಂ ಗದ್ದುಗೆ ಉಳಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

    ಇದನ್ನೂ ಓದಿರಿ ಕುಸುಮಾ ತಲೆ ಮೇಲೆ ‘ಕೈ’ ಇಟ್ರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ !

    ಪತ್ನಿಗೆ ಜಿಪಂ ಅಧ್ಯಕ್ಷೆ ಸ್ಥಾನ ಉಳಿಸಿಕೊಡಲು ಕಾಂಗ್ರೆಸ್ ಸೇರಿದ ಜೆಡಿಎಸ್​ ಟಿಕೆಟ್​ ಆಕಾಂಕ್ಷಿ!ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕುರುಬ ಸಮುದಾಯದ ರವಿಕುಮಾರ್​ ಕಾಂಗ್ರೆಸ್​ ಸೇರ್ಪಡೆಯಾಗಿದ್ದು, ಕ್ಷೇತ್ರ ಉಳಿಸಿಕೊಳ್ಳುವ ಸಂಕಲ್ಪ ತೊಟ್ಟಿರುವ ಜೆಡಿಎಸ್​ಗೆ ದೊಡ್ಡ ಹಿನ್ನಡೆ ಎನಿಸಿದೆ.

    ಯಾದವರಿಗೆ ಅಧ್ಯಕ್ಷ ಸ್ಥಾನ ಕೊಟ್ಟು ಶಿರಾ ಬೈ ಎಲೆಕ್ಷನ್​ನಲ್ಲಿ ರಾಜಕೀಯ ಲಾಭ ಪಡೆಯುವ ಬಿಜೆಪಿ ಲೆಕ್ಕಾಚಾರ ಉಲ್ಟಾ ಹೊಡೆದಿದೆ. ಜೆಡಿಎಸ್​ ಸದಸ್ಯರು ದಿಕ್ಕು ತೋಚದಂತಾಗಿದ್ದಾರೆ. ಸಾಕಷ್ಟು ಸಂಪನ್ಮೂಲದಿಂದ ಶಿರಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ರವಿಕುಮಾರ್​ ಸೇರ್ಪಡೆ ಜಯಚಂದ್ರಗೆ ಲಾಭ ಎನ್ನಲಾಗಿದೆ.

    ಶಿರಾ ಉಪಚುನಾವಣೆಯಲ್ಲಿ ಜೆಡಿಎಸ್​ ಟಿಕೆಟ್​ ಪ್ರಬಲ ಆಕಾಂಕ್ಷಿಯಾಗಿರುವ ಕಲ್ಕರೆ ರವಿಕುಮಾರ್​ ಪಕ್ಷಾಂತರ ಕಾಂಗ್ರೆಸ್​ಗೆ ಲಾಭ ತಂದುಕೊಡಲಿದೆ ಎಂಬ ಹಿನ್ನೆಲೆಯಲ್ಲಿ ಟಿ.ಬಿ.ಜಯಚಂದ್ರ ವಿಶೇಷ ಆಸಕ್ತಿವಹಿಸಿ ಪಕ್ಷಕ್ಕೆ ಕರೆತಂದಿದ್ದಾರೆ ಎನ್ನಲಾಗಿದೆ.

    ಆರ್​ಆರ್​ ನಗರ ಬೈ ಎಲೆಕ್ಷನ್​: ಕಾಂಗ್ರೆಸ್​ ಅಭ್ಯರ್ಥಿ ಯಾರು ಗೊತ್ತಾ? ಇಲ್ಲಿದೆ ಡಿಕೆಶಿ ಫೈನಲ್​ ಲಿಸ್ಟ್

    ನನ್ನ ಮಗನ ಫೋಟೋ-ಹೆಸರು ಬಳಸಿದ್ರೆ ಬೆಂಕಿ ಹಚ್ಚಿಸ್ತೀನಿ: ಸೊಸೆ ವಿರುದ್ಧ ಸಿಡಿದೆದ್ದ ಡಿ.ಕೆ. ರವಿ ತಾಯಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts