More

    ತುಂಗಭದ್ರಾ ಎಡದಂಡೆ ಕಾಲುವೆಯ ಅಕ್ರಮ ನೀರಾವರಿ ತಡೆಗೆ ಸಂಬಂಧಿಸಿ ನಿರೀಕ್ಷಿತ ಪರಿಹಾರ ಸಿಕ್ಕಿಲ್ಲ ; ರಾಘವೇಂದ್ರ ಕುಷ್ಟಗಿ ಅಸಮಾಧಾನ

    ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆ ಅಚ್ಚುಕಟ್ಟು ಪ್ರದೇಶದಲ್ಲಿನ ಅಕ್ರಮ ನೀರಾವರಿ ತಡೆಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಇತ್ತೀಚೆಗೆ ನೀರಾವರಿ ಸಚಿವ ರಮೇಶ ಜಾರಕಿಹೊಳಿಯೊಂದಿಗೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹೋರಾಟಗಾರರೊಂದಿಗೆ ಜರುಗಿದ ಸಭೆಯಲ್ಲಿ ನಿರೀಕ್ಷೆಯಂತೆ ಪರಿಹಾರ ದೊರೆತಿಲ್ಲ.

    ನಗರದಲ್ಲಿ ತುಂಗಭದ್ರಾ ಎಡದಂಡೆ ನಾಲೆ ರೈತರ ಹಿತ ರಕ್ಷಣಾ ಸಮಿತಿ ಸಂಚಾಲಕ ರಾಘವೇಂದ್ರ ಕುಷ್ಟಗಿ ಮಂಗಳವಾರ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಅಕ್ರಮ ನೀರಾವರಿಯ ದಾಖಲೆಗಳನ್ನು ನೀಡಿದರೂ ಅಧಿಕಾರಿಗಳ ಸಭೆ ನಡೆಸಿ ಕ್ರಮಕೈಗೊಳ್ಳುವ ಭರವಸೆ ಮಾತ್ರ ಸಭೆಯಲ್ಲಿ ಸಚಿವರು ನೀಡಿದ್ದಾರೆ. ನೀರಾವರಿ ಇಲಾಖೆ ಅಧಿಕಾರಿಗಳೇ ಕಾಲುವೆ ಅಚ್ಚುಕಟ್ಟು ಪ್ರದೇಶದಲ್ಲಿ ಒಂದು ಲಕ್ಷ ಎಕರೆಗೆ ಅಕ್ರಮವಾಗಿ ನೀರು ಪಡೆಯಲಾಗುತ್ತಿದೆ ಎಂದು ಅಧಿಕೃತವಾಗಿ ದಾಖಲೆಗಳನ್ನು ನೀಡಿದ್ದಾರೆ. ಅಕ್ರಮ ನೀರಾವರಿಗೆ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದ್ದರೂ ಸಚಿವರು ಕಠಿಣ ಕ್ರಮಕ್ಕೆ ಆದೇಶ ನೀಡಲಿಲ್ಲ.

    ಈ ಹಿಂದೆ ರಾಯಚೂರು, ಕೊಪ್ಪಳ ಜಿಲ್ಲಾಧಿಕಾರಿಗಳು ಸಿಂಧನೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ಮೂರು ದಿನಗಳ ಕಾಲ ಅಕ್ರಮ ತಡೆಗೆ ಮುಂದಾಗಿದ್ದರು. ಆದರೆ, ನಂತರದಲ್ಲಿ ಅವರ ಚಲನ ಶಕ್ತಿ ಕುಂದಿ ಹೋಗಿದೆ. ಇದರ ಹಿಂದೆ ಅವರಿಗೆ ಇದ್ದು, ಅವರು ಅದನ್ನು ಬಹಿರಂಗ ಪಡಿಸಲು ಮುಂದಾಗಬೇಕು. ಜನಪ್ರತಿನಿಧಿಗಳು, ಅಧಿಕಾರಿಗಳು ಹೋರಾಟ ಮಾಡುವ ಅನಿವಾರ್ಯತೆ ತಂದಿಟ್ಟಿದ್ದಾರೆ. ಈಗ ಹೋರಾಟ ಮುಂದುವರಿಸಲಾಗುವುದು. ಉಸ್ತುವಾರಿ ಸಚಿವ ಲಕ್ಷ್ಮಣ ಸವದಿಯನ್ನು ಭೇಟಿಯಾಗಿ ನಂತರ ಹೋರಾಟದ ರೂಪರೇಷೆಗಳನ್ನು ತೀರ್ಮಾನಿಸಲಾಗುವುದು ಎಂದು ರಾಘವೇಂದ್ರ ಕುಷ್ಟಗಿ ತಿಳಿಸಿದರು. ಸಮಿತಿ ಪದಾಧಿಕಾರಿಗಳಾದ ಚಾಮರಸ ಮಾಲಿಪಾಟೀಲ್, ನಾಗನಗೌಡ ಹರವಿ, ಖಾಜಾ ಅಸ್ಲಂ ಅಹ್ಮದ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts