More

    ತುಂಗಭದ್ರಾ ನದಿ ತೀರದಲ್ಲಿ ತುಂಗಾರತಿ ಫೆ. 11ರಂದು

    ರಾಣೆಬೆನ್ನೂರ: ತಾಲೂಕಿನ ಕೋಡಿಯಾಲ ಹೊಸಪೇಟೆಯ ತುಂಗಭದ್ರಾ ನದಿ ತೀರದಲ್ಲಿ ನೂತನವಾಗಿ ನಿರ್ಮಿಸಿರುವ ಪುಣ್ಯಕೋಟಿ ಮಠದ ತಪೋಮಂದಿರ ಲೋಕಾರ್ಪಣೆ ಸಮಾರಂಭ ಹಾಗೂ 5ನೇ ವರ್ಷದ ತುಂಗಾರತಿ ಸಮಾರಂಭ ಫೆ. 11ರಂದು ಜರುಗಲಿದೆ ಎಂದು ಎಂದು ಮಠದ ಶ್ರೀ ಬಾಲಯೋಗಿ ಜಗದೀಶ್ವರ ಸ್ವಾಮೀಜಿ ತಿಳಿಸಿದರು.
    ಪುಣ್ಯಕೋಟಿ ಮಠದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಾರತಿ ಹಿನ್ನೆಲೆಯಲ್ಲಿ ಫೆ. 11ರಂದು ಬೆಳಗಿನ ಜಾವ ಶ್ರೀ ಜಗದ್ಗುರು ರೇಣುಕಾಚಾರ್ಯ ಮಹಾಮೂರ್ತಿ ಪ್ರಾಣ ಪ್ರತಿಷ್ಠಾಪನೆ ಜರುಗಲಿದೆ. ಲಿಂಗದಹಳ್ಳಿ ಹಿರೇಮಠದ ಶ್ರೀ ವೀರಭದ್ರ ಶಿವಾಚಾರ್ಯರು ಪ್ರಾಣ ಪ್ರತಿಷ್ಠಾಪನೆ ನೆರವೇರಿಸುವರು. ಸಂಜೆ 5ಕ್ಕೆ ರಾಣೆಬೆನ್ನೂರಿನ ಹಿರೇಮಠದ ಶಿವಯೋಗಿ ಶಿವಾಚಾರ್ಯರು, ಆವರೊಳ್ಳಿ ರುದ್ರಸ್ವಾಮಿ ಮಠದ ಚನ್ನಬಸವ ದೇವರು, ದಾವಣಗೆರೆ ಹಿಂದು ರಾಷ್ಟ್ರಸೇನೆ ರಾಜ್ಯ ಪ್ರವಕ್ತ ಸಂದೀಪ ಗುರೂಜಿ ನೇತೃತ್ವದಲ್ಲಿ ತುಂಗಾರತಿ ಹಾಗೂ ಧರ್ಮಸಭೆ ಜರುಗಲಿದೆ.
    ಧರ್ಮಸಭೆಯಲ್ಲಿ ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರಿಗೆ ವಿಶ್ವಮಾತೆ ಪುಣ್ಯಕೋಟಿ ಪ್ರಶಸ್ತಿ ಹಾಗೂ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಸಜ್ಜನ ಜನನಾಯಕ ಪ್ರಶಸ್ತಿ ಪ್ರದಾನ ಮಾಡಲಾಗುವುದು.
    ಶಿರಾ ತಾಲೂಕು ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಮಹಾಸಂಸ್ಥಾನದ ಜಗದ್ಗುರು ನಂಜಾವಧೂತ ಸ್ವಾಮೀಜಿ, ಬೆಳಗಾವಿ ಜಿಲ್ಲೆ ಹುಕ್ಕೇರಿ ಗುರುಶಾಂತೇಶ್ವರ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಕಾಪುರ ಶ್ರೀ ವಿಶ್ವರಾಧ್ಯ ತಪೋವನಮಠದ ಡಾ. ಸಿದ್ಧರಾಮ ಶಿವಾಚಾರ್ಯರು ನೇತೃತ್ವ ಹಾಗೂ ಹೊದಲೂರು ನೂಲಿ ಚಂದಯ್ಯ ಗುರುಪೀಠದ ವೃಷಭೇಂದ್ರ ದೇಶಿಕೇಂದ್ರ ಸ್ವಾಮೀಜಿ, ವಿಜಯಪುರದ ಸಿದ್ಧಲಿಂಗೇಶ್ವರ ಮಠದ ಶ್ರೀ ಸಿದ್ಧಲಿಂಗ ದೇವರು ಸಮ್ಮುಖ ವಹಿಸುವರು.
    ಶಾಸಕರಾದ ಪ್ರಕಾಶ ಕೋಳಿವಾಡ, ಬಿ.ಪಿ. ಹರೀಶ, ಬಿಜೆಪಿ ಜಿಲ್ಲಾ ಅಧ್ಯಕ್ಷ ಅರುಣಕುಮಾರ ಪೂಜಾರ, ದಾವಣಗೆರೆ ನೂತನ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ ಅವರನ್ನು ಸನ್ಮಾನಿಸಲಾಗುವುದು. ಮಾಜಿ ಶಾಸಕರಾದ ಎಚ್.ಎಸ್. ಶಿವಶಂಕರ, ಆರ್. ಶಂಕರ, ಎಸ್. ರಾಮಪ್ಪ, ಸೋಮಣ್ಣ ಬೇವಿನಮರದ, ಜಿಪಂ ಮಾಜಿ ಸದಸ್ಯ ಕೆ.ಇ. ಕಾಂತೇಶ ಮತ್ತಿತರರು ಪಾಲ್ಗೊಳ್ಳುವರು ಎಂದು ತಿಳಿಸಿದರು.
    ಪ್ರಮುಖರಾದ ಡಾ. ಎನ್. ನಾಗರಾಜ, ದಿನೇಶ, ಎನ್.ಎಚ್. ಹಾವನೂರ, ಬಿ.ಎಚ್. ಮಂಜುನಾಥ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts