21.7 C
Bengaluru
Tuesday, January 21, 2020

ಸುರಂಗದೊಳಗೆ ತೆರಳಿದಾತ ಮೃತ್ಯು

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

«ಮುಳ್ಳುಹಂದಿ ಬೇಟೆಗೆ ತೆರಳಿದ್ದ ಯುವಕ *13 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ»

ವಿಜಯವಾಣಿ ಸುದ್ದಿಜಾಲ ಉಪ್ಪಳ
ಬಾಯಾರುಪದವು ಸಮೀಪ ಧರ್ಮತ್ತಡ್ಕ ಬಾಳಿಕೆಯಲ್ಲಿ ಮುಳ್ಳುಹಂದಿ ಬೇಟೆಗೆ ಸುರಂಗದೊಳಗೆ ತೆರಳಿದ ಧರ್ಮತ್ತಡ್ಕ ಗುಂಪೆ ನಿವಾಸಿ, ಕೂಲಿ ಕಾರ್ಮಿಕ ರಮೇಶ(35) ಮಣ್ಣು ಕುಸಿದು ಹೊರಬರಲಾರದೆ ಮೃತಪಟ್ಟಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳೀಯರ ನೆರವಿನಿಂದ ಸತತ 13 ಗಂಟೆ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದಾರೆ.

ಘಟನೆ ವಿವರ: ಗುರುವಾರ ಸಾಯಂಕಾಲ ಮುಳ್ಳುಹಂದಿ ಬೇಟೆಗೆಂದು ನಾಲ್ವರು ಸಹವರ್ತಿಗಳ ಜತೆ ತೆರಳಿದ್ದ ರಮೇಶ, ಕಿರಿದಾದ ಸುರಂಗದೊಳಕ್ಕೆ ತೆರಳಿ ಒಂದು ಮುಳ್ಳುಹಂದಿಯನ್ನು ಹಿಡಿದು ತಂದಿದ್ದರು. ಮತ್ತೊಂದು ಮುಳ್ಳುಹಂದಿ ಹಿಡಿಯಲು ಸೊಂಟಕ್ಕೆ ಹಗ್ಗ ಕಟ್ಟಿ ತೆರಳಿದ್ದು, ಹೊರಬರಲಾಗದಿದ್ದರೆ ಸೂಚನೆ ನೀಡುತ್ತೇನೆ, ನಂತರ ಹಗ್ಗದ ಮೂಲಕ ನನ್ನನ್ನು ಎಳೆಯಿರಿ ಎಂದು ಹೇಳಿದ್ದರು ಎನ್ನಲಾಗಿದೆ. ಆದರೆ ಬಹಳ ಹೊತ್ತಿನವರೆಗೂ ಹೊರಬಾರದೆ ಇದ್ದುದನ್ನು ಗಮನಿಸಿದ ಯುವಕರು, ಸ್ಥಳೀಯರ ಮೂಲಕ ಉಪ್ಪಳ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ತಡರಾತ್ರಿ ಕಾರ್ಯಾಚರಣೆ
ರಾತ್ರಿ ಸುಮಾರು 8.30ರಿಂದ ಅಗ್ನಿಶಾಮಕದಳ ಹಾಗೂ ಸ್ಥಳೀಯರು ಆಕ್ಸಿಜನ್ ಸಿಲಿಂಡರ್ ಬಳಸಿ ತಡರಾತ್ರಿವರೆಗೂ ಕಾರ್ಯಾಚರಣೆ ನಡೆಸಿದರು. ಸುರಂಗದೊಳಗೆ ತೇವಾಂಶ ಭರಿತ ಮಣ್ಣು ಕುಸಿದು ಬಿದ್ದ ಪರಿಣಾಮ ರಮೇಶ ಅವರನ್ನು ಹೊರತರುವ ಶ್ರಮ ವಿಫಲವಾಗಿತ್ತು. ಸುರಂಗ ಕೇವಲ 1.20 ಮೀ. ಅಗಲವಿದ್ದು, ಏಕಕಾಲದಲ್ಲಿ ಒಬ್ಬರು ಮಾತ್ರ ತೆರಳುವಷ್ಟೇ ಕಿರಿದಾಗಿರುವುದು ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿತ್ತು.

ಮಣ್ಣು ತೆಗೆದು ಮೃತದೇಹ ಹೊರಕ್ಕೆ
ಶುಕ್ರವಾರ ಮುಂಜಾನೆ ಮತ್ತೆ ಕಾರ್ಯಾಚರಣೆ ಆರಂಭಿಸಿದ ಅಗ್ನಿಶಾಮಕ ಸಿಬ್ಬಂದಿ ಸುರಂಗ ನಿರ್ಮಾಣ ಅನುಭವವಿರುವ ಕಾರ್ಮಿಕರ ಸಹಾಯದಿಂದ ಸುರಂಗದ ಒಳಗಡೆ ಕುಸಿದು ಬಿದ್ದಿರುವ ಮಣ್ಣನ್ನು ಹೊರಸಾಗಿಸಿದರು. ಸಾಯಂಕಾಲ 4.30ರ ಸುಮಾರಿಗೆ ರಮೇಶ ಅವರ ಮೃತದೇಹವನ್ನು ಹೊರತೆಗೆಯಲಾಯಿತು.
ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿಯೊಂದಿಗೆ ಸ್ಥಳೀಯ ನಾಗರಿಕರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾಧಿಕಾರಿ ಡಾ.ಡಿ ಸಜಿತ್ ಬಾಬು, ಪುತ್ತಿಗೆ ಗ್ರಾಪಂ ಅಧ್ಯಕ್ಷೆ ಅರುಣಾ ಜೆ, ಪೈವಳಿಕೆ ಗ್ರಾಪಂ ಅಧ್ಯಕ್ಷೆ ಭಾರತಿ ಜೆ.ಶೆಟ್ಟಿ, ಗ್ರಾಪಂ ಸದಸ್ಯ ಸುಬ್ರಹ್ಮಣ್ಯ ಭಟ್, ಜಿಪಂ ಸದಸ್ಯೆ ಪುಷ್ಪಾ ಅಮೆಕ್ಕಳ, ಸ್ಥಳೀಯ ವಾರ್ಡ್ ಸದಸ್ಯ ಚನಿಯ ಪಾಡಿ ಸ್ಥಳಕ್ಕಾಗಮಿಸಿದರು.

ಹಿಂದೆಯೂ ಸಂಭವಿಸಿತ್ತು ದುರಂತ
ಕಾಡುಪ್ರಾಣಿಗಳ ಬೇಟೆ ಅಪರಾಧವಾಗಿದ್ದರೂ, ಮುಳ್ಳುಹಂದಿ ಬೇಟೆ ಇತ್ತೀಚೆಗೆ ಮಂಜೇಶ್ವರ ತಾಲೂಕಿನಲ್ಲಿ ಸಾಮಾನ್ಯ ಎನ್ನುವಂತಾಗಿದೆ. ವರ್ಷಗಳ ಹಿಂದೆ ಇದೇ ಪರಿಸರದಲ್ಲಿ ಮುಳ್ಳುಹಂದಿ ಬೇಟೆಗೆಂದು ಸುರಂಗದಲ್ಲಿ ಹೊಗೆ ಹಾಕಿದ ಪರಿಣಾಮ ಇಬ್ಬರು ಅಸುನೀಗಿದ್ದರು. 15 ವರ್ಷ ಹಿಂದೆ ಮೇಪ್ಪಾಟು ಎಂಬಲ್ಲಿ ಮುಳ್ಳುಹಂದಿ ಬೇಟೆಗೆ ಸುರಂಗದೊಳಗೆ ತೆರಳಿದ್ದ ಮೂವರು ಮೃತಪಟ್ಟಿದ್ದರು.

ನಿಗೂಢ ಗುಹೆಗಳು
ಧರ್ಮತ್ತಡ್ಕ, ಪೆರ್ಮುದೆ, ಸಜಂಕಿಲ, ಕನಿಯಾಲ ಪರಿಸರಗಳು ರಾಷ್ಟ್ರದಲ್ಲೇ ಅತ್ಯಧಿಕ ಸುರಂಗಗಳಿರುವ ಪ್ರದೇಶವಾಗಿ ಗುರುತಿಸಲ್ಪಟ್ಟಿದೆ. ಇವುಗಳಲ್ಲಿ ಕೆಲವು ಮಾನವ ನಿರ್ಮಿತವಾದರೆ ಹಲವು ಪ್ರಾಕೃತಿಕವಾದವುಗಳು. ಇಲ್ಲಿಯ ಸುರಂಗಗಳು ಕುತೂಹಲಕರವಾಗಿರುವಷ್ಟೇ ಅಪಾಯಕಾರಿಯೂ ಹೌದು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...