-ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಸಭೆ
ಬೆಳಗಾವಿ, ನ.4(ಕರ್ನಾಟಕ ವಾರ್ತೆ): ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ಅವರು ಮಂಗಳವಾರ(ನ.5) ಬೆಳಗಾವಿಗೆ ಭೇಟಿ ನೀಡಿ, ಶತಮಾನೋತ್ಸವ ಆಚರಣೆ ಕುರಿತು ಸಭೆಯನ್ನು ನಡೆಸಲಿದ್ದಾರೆ.
1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಎಚ್.ಕೆ.ಪಾಟೀಲ, ಗೌರವ ಅಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಸಮಿತಿಯ ರಾಜ್ಯ ಸಂಚಾಲಕರಾದ ವಿಧಾನ ಪರಿಷತ್ ಮಾಜಿ ಸಭಾಪತಿ ಬಿ.ಎಲ್.ಶಂಕರ ಅವರ ಜತೆ ಜಂಟಿಯಾಗಿ ಭೇಟಿ ನೀಡಲಿದ್ದಾರೆ.
ಇದಾದ ಬಳಿಕ ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿಗಳ ಜತೆ ಸಭೆಯನ್ನು ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
***