

Tayyip Erdogan: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 80 ನೇ ಅಧಿವೇಶನದಲ್ಲಿ ಮಂಗಳವಾರ(ಸೆ.23) ಮಾತನಾಡಿರುವ ಮಾತನಾಡಿರುವ ಟರ್ಕಿ ಅಧ್ಯಕ್ಷ ತಯ್ಯಿಪ್ ಎರ್ಡೋಗನ್, ಕಾಶ್ಮೀರ ವಿಚಾರವನ್ನು ಉಲ್ಲೇಖಿಸಿದ್ದು, ಈ ವರ್ಷದ ಆರಂಭದಲ್ಲಿ ನಡೆದ ಸಂಘರ್ಷದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮದಿಂದ ತಮಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆ
ಕಾಶ್ಮೀರದ ನಮ್ಮ ಸಹೋದರ ಸಹೋದರಿಯರಿಗೆ ಉತ್ತಮವಾದದ್ದನ್ನು ಪಡೆಯಲು ವಿಶ್ವಸಂಸ್ಥೆಯ ನಿರ್ಣಯಗಳ ಆಧಾರದ ಮೇಲೆ ಕಾಶ್ಮೀರದ ಸಮಸ್ಯೆಯನ್ನು ಮಾತುಕತೆಯ ಮೂಲಕ ಪರಿಹರಿಸಬೇಕು ಎಂದು ನಾವು ಬಯಸುತ್ತೇವೆ. ಭಯೋತ್ಪಾದನೆ ನಿಗ್ರಹದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಹಕಾರ ಇರುವುದು ಮುಖ್ಯ. ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡುವುದು ಅತ್ಯಂತ ಮುಖ್ಯವೆಂದು ಎಂದು ತಿಳಿಸಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ, ಇದೇ ಮೊದಲ ಬಾರಿಗೆ ಟರ್ಕಿ ನಾಯಕ ಉನ್ನತ ಮಟ್ಟದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ವಿಶ್ವ ನಾಯಕರನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಕಾಶ್ಮೀರದ ವಿಷಯವನ್ನು ಉಲ್ಲೇಖಿಸಿದ್ದಾರೆ.
26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ, ಭಾರತವು ಮೇ 7 ರಂದು ಪಾಕಿಸ್ತಾನ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ನಾಲ್ಕು ದಿನಗಳ ಕಾಲ ನಡೆದ ಕಾರ್ಯಾಚರಣೆಯೂ ತೀವ್ರ ಘರ್ಷಣೆಗೆ ಕಾರಣವಾಗಿತ್ತು. ಮೇ 10 ರಂದು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಕದನ ವಿರಾಮ ಘೋಷಿಸಲಾಯಿತು. (ಏಜೆನ್ಸೀಸ್)