More

    ಸೈಲೆಂಟ್​ ಪೀರಿಯಡ್​ನಲ್ಲಿ ಮಾಧ್ಯಮಗಳಲ್ಲಿ ಪ್ರಚಾರ ನಿರ್ಬಂಧ: ತುಷಾರ್​ ಗಿರಿನಾಥ್​

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮತದಾನ ಅಂತ್ಯಗೊಳ್ಳುವ 48 ಘಂಟೆಗಳಿಗೂ ಮೊದಲು ಚುನಾವಣಾ ಸಂಬಂಧಿತ ವಿಷಯಗಳ ಪ್ರಸಾರವನ್ನು ನಿಷೇಧಿಸಲಾಗಿದೆ.

    ಈ ಕುರಿತು ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಕಲಂ 126ರ ಪ್ರಕಾರ ಮಾಧ್ಯಮಗಳಲ್ಲಿ ಚುನಾವಣೆಗೆ ಸಂಬಂಧಿಸಿದ ವಿಷಯಗಳನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

    ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಅಥವಾ ಪರಿಣಾಮ ಬೀರುವಂತಹ ಯಾವುದೇ ರಾಜಕೀಯ ಪ್ರಚಾರ ಅಥವಾ ಇತರೆ ವಿಷಯಗಳ ಪ್ರಸಾರದ ಮೇಲೆ ನಿರ್ಬಂಧ ಇರುತ್ತದೆ. ಕಾಯ್ದೆಯನ್ನು ಉಲ್ಲಂಘಿಸಿ ಶಿಕ್ಷೆಯನ್ನು ವಿಧಿಸುವ ಅವಕಾಶವಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

    ಸೈಲೆಂಟ್​ ಪೀರಿಯಡ್​ನಲ್ಲಿ ಮಾಧ್ಯಮಗಳಲ್ಲಿ ಪ್ರಚಾರ ನಿರ್ಬಂಧ: ತುಷಾರ್​ ಗಿರಿನಾಥ್​

    ಇದನ್ನೂ ಓದಿ: ಯೂಟ್ಯೂಬ್​ನಲ್ಲಿ ಲೈಕ್​ ಮಾಡಿ ಹಣ ಗಳಿಸಿ; ಆಫರ್​ ನೀಡಿ ಸಿಕ್ಕಿಬಿದ್ದ ಖದೀಮ

    ಕಡ್ಡಾಯವಾಗಿ ಪಾಲಿಸಿ

    ಆದ್ದರಿಂದ ಮಾಧ್ಯಮಗಳಲ್ಲಿ ಮತದಾನ ಪೂರ್ವ 48 ಘಂಟೆಗಳ ಮೊದಲು ಚುನಾವಣೆಗೆ ಸಂಬಂಧಿಸಿದ ವಿಷಯಗಳು ಪ್ರಸಾರ ಮಾಡದಂತೆ ಕ್ರಮ ವಹಿಸಬೇಕು. ಈ ನಿಗದಿತ ಸಮಯದಲ್ಲಿ ಅಭಿಪ್ರಾಯ ಸಮೀಕ್ಷೆ, ಚರ್ಚೆ, ಎಕ್ಸಿಟ್​ ಪೋಲ್​ ಪ್ರಸಾರ ಮಾಡುವುದು ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಕಲಂ 126ರ ಅಡಿಯಲ್ಲಿ ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದೆ.

    ಕರ್ನಾಟಕ ವಿಧಾನಸಬೆ ಚುನಾವಣೆ 2023ರ ಅಂಗವಾಗಿ ಮೇ 10ರಂದು ಒಂದೇ ಹಂತದಲ್ಲಿ ನಡೆಯಲಿದ್ದು ಮೇ 8ರ ಸಂಜೆ 6 ಘಂಟೆ ಇಂದ ಮೇ 10ರ ಸಂಜೆ 6:30ರವರೆಗೆ ಮೇಲ್ಕಂಡ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್​ ತಮ್ಮ ಪ್ರಕರಟಣೆಯ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts