More

    ಪರೀಕ್ಷೆ ಪ್ರಮಾಣ ಕನಿಷ್ಠ 2100ಕ್ಕೆ ಹೆಚ್ಚಿಸಿ : ಉಸ್ತುವಾರಿ ಕಾರ್ಯದರ್ಶಿ ತುಷಾರ್ ಗಿರಿನಾಥ್ ಸೂಚನೆ

    ರಾಮನಗರ : ಜಿಲ್ಲೆಯಲ್ಲಿ ಸರಾಸರಿ ಪ್ರತಿದಿನ 350ರಿಂದ 400 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕಕ್ಕೆ ಬರುವವರು ಸೇರಿದಂತೆ ಪ್ರತಿನಿತ್ಯವೂ ಕೋವಿಡ್-19 ಪರೀಕ್ಷೆಯ ಪ್ರಮಾಣವನ್ನು ಕನಿಷ್ಠ 2100ಕ್ಕೆ ಹೆಚ್ಚಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಷಾರ್ ಗಿರಿನಾಥ್ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿದ್ದ ಕೋವಿಡ್-19 ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೂ, ಕೋವಿಡ್ ಸೋಂಕಿಗೆ ಒಳಗಾಗುತಿರುವ ಪ್ರಾಥಮಿಕ ಸಂಪರ್ಕಕ್ಕೆ ಬರುವವರು ಸೇರಿದಂತೆ ಜಿಲ್ಲೆಯಲ್ಲಿ ಪ್ರತಿನಿತ್ಯ 2100 ರಿಂದ 2400 ಮಂದಿಗೆ ಕೋವಿಡ್ ಟೆಸ್ಟ್ ನಡೆಸುವ ಮೂಲಕ ಸೋಂಕು ಹರಡದಂತೆ ಮುಂಜಾಗ್ರತೆ ಕೈಗೊಳ್ಳವಂತೆ ಜಿಲ್ಲಾಡಳಿತಕ್ಕೆ ತಿಳಿಸಿದರು.

    ಐಎಲ್‌ಐ, ಎಸ್‌ಎಆರ್‌ಐ ಪ್ರಕರಣಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಹಾಗೆಯೇ ಖಾಸಗಿ ಆಸ್ಪತ್ರೆಗಳಲ್ಲಿ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ವ್ಯವಸ್ಥಿತವಾಗಿ ಅವುಗಳು ವರದಿಯಾಗುವಂತೆ ನೋಡಿಕೊಳ್ಳಲು ಆರೋಗ್ಯ ಇಲಾಖೆಗೆ ಕಾರ್ಯದರ್ಶಿಗಳು ಸೂಚನೆ ನೀಡಿದರು.

    ಹೋಮ್ ಐಸೋಲೇಷನ್: ಜಿಲ್ಲೆಯಲ್ಲಿ ಹೋಮ್ ಐಸೋಲೇಷನ್ ಸಂಖ್ಯೆಯನ್ನು ಸಾಧ್ಯವಾದಷ್ಟು ಮಟ್ಟಿಗೆ ಕಡಿತಗೊಳಿಸಲಾಗಿದೆ. ಸೋಂಕಿಗೆ ಒಳಗಾಗುವವರಿಗೆ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ನಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದಾಗಿ ಗ್ರಾಮೀಣ ಮಟ್ಟದಲ್ಲಿ ಸೋಂಕು ಹರಡುವುದನ್ನು ತಪ್ಪಿಸಲಾಗುತ್ತಿದೆ. ಜಿಲ್ಲೆಯಲ್ಲಿ 1650 ಮಂದಿ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ ಸಭೆಗೆ ಮಾಹಿತಿ ನೀಡಿದರು.

    ಹೋಮ್ ಐಸೋಲೇಷನ್‌ಗಿಂತ ಕೋವಿಡ್ ಕೇರ್ ಸೆಂಟರ್‌ಗಳಿಗೆ ಸೋಂಕಿತರು ಸೇರುವಂತೆ ಉತ್ತೇಜಿಸಬೇಕು. ಇಲ್ಲಿರುವವರಿಗೆ ಅಗತ್ಯ ವೈದ್ಯಕೀಯ ನೆರವು, ಪೌಷ್ಠಿಕ ಆಹಾರ, ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವಂತೆ ತಿಳಿಸಿದ ಕಾರ್ಯದರ್ಶಿಗಳು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
    ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್, ಆರ್‌ಸಿಎಚ್‌ಒ ಡಾ. ಪದ್ಮಾ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

     

    ಲಸಿಕೆ : ಜಿಲ್ಲೆಯಲ್ಲಿ ಒಟ್ಟಾರೆ ಜನಸಂಖ್ಯೆ 12 ಲಕ್ಷ. ಈ ಪೈಕಿ 8.5 ಲಕ್ಷ ಮಂದಿಗೆ ಲಸಿಕೆ ನೀಡಬೇಕಾಗಿದೆ. 45 ವರ್ಷ ಮೇಲ್ಪಟ್ಟವರ ಸಂಖ್ಯೆ 3 ಲಕ್ಷದಷ್ಟಿದೆ. ಈ ಪೈಕಿ 1.83 ಲಕ್ಷ ಮಂದಿ ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಇನ್ನು 1.17 ಲಕ್ಷ ಮಂದಿಗೆ ಲಸಿಕೆ ನೀಡಬೇಕಾಗಿದೆ ಎಂದು ಜಿಪಂ ಸಿಇಒ ಇಕ್ರಂ ತಿಳಿಸಿದರು.

    ಜಿಲ್ಲೆಯಲ್ಲಿ ಪ್ರತಿನಿತ್ಯ 5500- 6000 ಮಂದಿಗೆ ಲಸಿಕೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರಮಾಣವನ್ನು ಹೆಚ್ಚಳ ಮಾಡಿ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದನ್ನು 15 ದಿನಗಳ ಒಳಗಾಗಿ ಪೂರ್ಣಗೊಳಿಸಬೇಕು ಸುವಂತೆ ಉಸ್ತುವಾರಿ ಕಾರ್ಯದರ್ಶಿ ತುಷಾರ್ ಗಿರಿನಾಥ್ ಸೂಚಿಸಿದರು. ಜಿಲ್ಲೆಯಲ್ಲಿ 18 ರಿಂದ 45 ವರ್ಷದೊಳಗಿನವರ ಸಂಖ್ಯೆ 5.13 ಲಕ್ಷದಷ್ಟಿದೆ. ಮುಂದಿನ ದಿನಗಳಲ್ಲಿ ಈ ವರ್ಗದವರಿಗೂ ಲಸಿಕೆ ನೀಡಲು ರೂಪುರೇಷೆ ಸಿದ್ಧಪಡಿಸಿ ಇಟ್ಟುಕೊಳ್ಳುವಂತೆ ಆರೋಗ್ಯ ಇಲಾಖೆಗೆ ಪ್ರಧಾನ ಕಾರ್ಯದರ್ಶಿಗಳು ತಿಳಿಸಿದರು. ಹಾಗೂ ಮುಂದಿನ 3 ತಿಂಗಳ ಒಳಗಾಗಿ ಜಿಲ್ಲೆಯಲ್ಲಿರುವ ಎಲ್ಲ 8.5 ಲಕ್ಷ ಮಂದಿಗೂ ಲಸಿಕೆ ನೀಡುವಂತೆ ಕಾರ್ಯಪ್ರವೃತ್ತರಾಗಲು ಕಾರ್ಯದರ್ಶಿಗಳು ತಿಳಿಸಿದರು.

     

    ಬಂದೋಬಸ್ತ್
    ಜಿಲ್ಲೆಯ ಪಡಿತರ ವಿತರಣಾ ಕೇಂದ್ರ, ಹಾಲಿನ ಬೂತ್, ಇತರ ವ್ಯಾಪಾರಿ ಕೇಂದ್ರಗಳಲ್ಲಿ ದೈಹಿಕ ಅಂತರ ಪಾಲನೆಯಾಗುತ್ತಿಲ್ಲ. ಇಂತಹ ಕಡೆಗಳಲ್ಲಿ ಕಟ್ಟುನಿಟ್ಟಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಮತ್ತು ದೈಹಿಕ ಅಂತರವನ್ನು ಪಾಲಿಸುವುದನ್ನು ಕಡ್ಡಾಯಗೊಳಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸುವಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ತುಷಾರ್ ಗಿರಿನಾಥ್ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts