17.8 C
Bengaluru
Wednesday, January 22, 2020

ಗ್ವಾಟೆಮಾಲಾ ನಗರದಲ್ಲಿ ಟಿವಿಎಸ್ ಫ್ಲ್ಯಾಗ್​ಶಿಪ್ ಶೋರೂಂ: ಕ್ಯಾಡಿಸಾ ಸಂಸ್ಥೆ ಸಹಯೋಗದೊಂದಿಗೆ ನೂತನ ಮಳಿಗೆ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಬೆಂಗಳೂರು: ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ತಯಾರಿಕೆಯಲ್ಲಿ ವಿಶ್ವದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ಟಿವಿಎಸ್ ಮೋಟಾರ್ ಕಂಪನಿ, ಕ್ಯಾಡಿಸಾ ಸಹಭಾಗಿತ್ವದಲ್ಲಿ ಮಧ್ಯ ಅಮೇರಿಕಾದ ಗ್ವಾಟೆಮಾಲಾ ನಗರದಲ್ಲಿ ತನ್ನ ಫ್ಲ್ಯಾಗ್​ಶಿಪ್ ಶೋರೂಂ ಆರಂಭಿಸುವುದಾಗಿ ಘೋಷಿಸಿದೆ.

ಗ್ವಾಟೆಮಾಲಾ ಮತ್ತು ಎಲ್ ಸಾಲ್ವಡಾರ್​ನ ಅತಿದೊಡ್ಡ ಕಂಪನಿ ಕ್ಯಾಡಿಸಾ ಸಹಭಾಗಿತ್ವದೊಂದಿಗೆ, ಟಿವಿಎಸ್ ಮೋಟಾರ್ ಕಂಪನಿಯ ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಆರಂಭಗೊಳ್ಳಿರುವ ಶೋರೂಂ, ಮಧ್ಯ ಅಮೇರಿಕದ ಅತಿದೊಡ್ಡ ಹಾಗೂ ವಿಶೇಷ ಮಳಿಗೆಗಳಲ್ಲಿ ಒಂದಾಗಲಿದೆ ಎಂದು ಸಂಸ್ಥೆ ಪ್ರಕಟಿಸಿದೆ.

ಉದ್ದೇಶಿತ ಮೂರು ಪ್ರಮುಖ ಶೋರೂಂಗಳ ಪೈಕಿ ಮೊದಲನೆಯದಾದ ಈ ಮಳಿಗೆ ಟಿವಿಎಸ್ ಕಂಪನಿಯ ಅತ್ಯುನ್ನತ ತಂತ್ರಜ್ಞಾನ ಹಾಗೂ ಗುಣಮಟ್ಟವನ್ನು ಗ್ರಾಹಕರಿಗೆ ಪರಿಚಯಿಸಲಿದ್ದು, ಗ್ವಾಟೆಮಾಲಾ ಹಾಗೂ ಎಲ್ ಸಾಲ್ವಡಾರ್​ನ ಎಲ್ಲ ರೀಟೇಲ್ ಮಾರಾಟ ಮಳಿಗೆಗಳಿಗೆ ಅಗತ್ಯ ಸೇವೆ ಹಾಗೂ ಬಿಡಿ ಭಾಗಗಳನ್ನು ಪೂರೈಸಲಿದೆ ಎಂದು ಟಿವಿಎಸ್ ಮೋಟಾರ್ ಕಂಪನಿ ತಿಳಿಸಿದೆ.

ಈ ಕುರಿತು ಮಾತನಾಡಿದ ಟಿವಿಎಸ್ ಮೋಟಾರ್ ಕಂಪನಿಯ ಅಂತಾರಾಷ್ಟ್ರೀಯ ವ್ಯವಹಾರಗಳ ಕಾರ್ಯ ನಿರ್ವಾಹಕ ಉಪಾಧ್ಯಕ್ಷ ಆರ್. ದಿಲೀಪ್, ಕ್ಯಾಡಿಸಾ ಸಹಯೋಗದೊಂದಿಗೆ ಗ್ವಾಟೆಮಾಲಾ ನಗರದಲ್ಲಿ ಶೋರೂಂ ಆರಂಭಿಸುತ್ತಿರುವುದು ಸಂತಸದ ವಿಚಾರವಾಗಿದೆ. ಜಾಗತಿಕ ಗುಣಮಟ್ಟದ ಮಾನದಂಡಗಳನ್ನು ಹೊಂದಿರುವ ನೂತನ ಶೋರೂಂ, 60ಕ್ಕೂ ಅಧಿಕ ದೇಶಗಳೊಂದಿಗೆ ವಹಿವಾಟು ನಡೆಸುತ್ತಿರುವ ಟಿವಿಎಸ್ ಮೋಟಾರ್ ಕಂಪನಿಯ ಮಾರುಕಟ್ಟೆ ಬದ್ಧತೆ ಪ್ರದರ್ಶಿಸಲಿದೆ ಎಂದರು.

ಉನ್ನತ ತಂತ್ರಜ್ಞಾನದ 310 ಸಿಸಿ ಸೂಪರ್ ಪ್ರೀಮಿಯಂ ಮೋಟಾರ್​ಸೈಕಲ್​ನಿಂದ ಹಿಡಿದು 125 ಸಿಸಿ ಪರ್ಫಾರ್ವೆನ್ಸ್ ಸ್ಕೂಟರ್​ವರೆಗಿನ ನಾಲ್ಕು ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಿದ್ದು, ಈ ಉತ್ಪನ್ನಗಳು ವಿಭಿನ್ನ ವಿಭಾಗಗಳ ಗ್ರಾಹಕರ ನಿರ್ದಿಷ್ಟ ಅಗತ್ಯತೆಗಳನ್ನು ಪೂರೈಸುವ ಜತೆಗೆ ಮಾರುಕಟ್ಟೆಯಲ್ಲಿ ಟಿವಿಎಸ್ ಸಂಸ್ಥೆಗೆ ಸ್ಥಾನ ಕಲ್ಪಿಸಲಿದೆ ಎಂದು ತಿಳಿಸಿದರು.

ಕ್ಯಾಡಿಸಾ ಸಂಸ್ಥೆಯ ಹಿರಿಯ ನಿರ್ದೇಶಕ ಜಾರ್ಜ್ ಸೀಕಾವಿಜಾ ಮಾತಾನಡಿ, ಟಿವಿಎಸ್ ಮೋಟಾರ್ ಕಂಪನಿ ಸಹಭಾಗಿತ್ವದೊಂದಿಗೆ ಗ್ವಾಟೆಮಾಲಾ ನಗರದಲ್ಲಿ ಪ್ರಮುಖ ಶೋರೂಂ ಆರಂಭಿಸಲು ಉತ್ಸುಕರಾಗಿದ್ದೇವೆ. ಗ್ರಾಹಕರಿಗೆ ಅಗತ್ಯವಿರುವ ಎಲ್ಲ ಸೇವೆಗಳು, ಬಿಡಿ ಭಾಗಗಳನ್ನು ಪೂರೈಸುವ ಉದ್ದೇಶ ಹೊಂದಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಎರಡು ಪ್ರಮುಖ ಮಳಿಗೆಗಳನ್ನು ಆರಂಭಿಸಲಾಗುತ್ತದೆ. ಕ್ಯಾಡಿಸಾ ಸಹಯೋಗದಲ್ಲಿ ಟಿವಿಎಸ್ ಸಂಸ್ಥೆಯ ವಿಶ್ವ ದರ್ಜೆಯ ಉತ್ಪನ್ನಗಳನ್ನು ಪಡೆಯಬಹುದು ಎಂದು ನಮ್ಮ ಗ್ರಾಹಕರಿಗೆ ಭರವಸೆ ನೀಡುತ್ತೇವೆ ಎಂದರು.

4 ಉತ್ಪನ್ನಗಳು ಮಾರುಕಟ್ಟೆಗೆ: ಟಿವಿಎಸ್ ಮೋಟಾರ್ ಕಂಪನಿಯು ತನ್ನ 4 ಹೊಸ ಮಹತ್ವಾಕಾಂಕ್ಷೆಯ ಉತ್ಪನ್ನಗಳಾದ ಟಿವಿಎಸ್ ಅಪಾಚೆ ಆರ್​ಆರ್ 310, ಟಿವಿಎಸ್ ಅಪಾಚೆ ಆರ್​ಟಿಆರ್ 200 4ವಿ, ಟಿವಿಎಸ್ ಅಪಾಚೆ ಆರ್​ಟಿಆರ್ 1604ವಿ ಹಾಗೂ ಟಿವಿಎಸ್ ಎನ್​ಟಾರ್ಕ್ 125 ಮೋಟಾರ್ ಸೈಕಲ್​ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ.
ಗ್ವಾಟೆಮಾಲಾ ಹಾಗೂ ಎಲ್ ಸಾಲ್ವಡಾರ್​ನಾದ್ಯಂತ ಟಿವಿಎಸ್ ಬ್ರಾ್ಯಂಡ್ ಅನ್ನು ಪ್ರತಿನಿಧಿಸಲಿರುವ ಕ್ಯಾಡಿಸಾ, ಟಿವಿಎಸ್ ಮೋಟಾರ್ ಕಂಪನಿ ಸಹ ಗ್ವಾಟೆಮಾಲಾದ 17 ಮಲಿಸುವ ಮೂಲಕೆಗಳು ಮತ್ತು 150 ಕ್ಕೂ ಅಧಿಕ ರೀಟೇಲ್ ಮಳಿಗಳಲ್ಲಿರಲಿದ ಟಿವಿಎಸ್ ಮೋಟಾರ್ ಕಂಪನಿ ಸಹ ಗ್ವಾಟೆಮಾಲಾದ 17 ಮಲ್ಟಿ-ಬ್ರಾ್ಯಂಡ್ ಮಳಿಗೆಗಳು ಮತ್ತು 150 ಕ್ಕೂ ಅಧಿಕ ರೀಟೇಲ್ ಮಳಿಗಳಲ್ಲಿರಲಿದೆ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ಆಕರ್ಷಕ ಹಣಕಾಸು ಯೋಜನೆಗಳೊಂದಿಗೆ ಪೂರೈಸಲಾಗುವುದು ಎಂದು ಕ್ಯಾಡಿಸಾ ತಿಳಿಸಿದೆ.

 

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...