More

    ಮಾಜಿ ಸಂಸದ ರಾಜಾ ರಂಗಪ್ಪ ನಾಯಕ ಇನ್ನಿಲ್ಲ

    ಸುರಪುರ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಯಚೂರಿನ ಮಾಜಿ ಸಂಸದ ರಾಜಾ ರಂಗಪ್ಪ ನಾಯಕ (61) ಭಾನುವಾರ ತಡರಾತ್ರಿ ಇಲ್ಲಿನ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಸಹೋದರ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಒಬ್ಬ ಪುತ್ರ, ಇಬ್ಬರು ಪುತ್ರಿಯರು ಮತ್ತು ಅಪಾರ ಬಳಗವನ್ನು ಅಗಲಿದ್ದಾರೆ.

    ರಾಜಕೀಯ ಮುತ್ಸದ್ಧಿಯಾಗಿದ್ದ ರಾಜಾ ರಂಗಪ್ಪ ನಾಯಕ್ ಅತ್ಯಂತ ಸರಳ ವ್ಯಕ್ತಿತ್ವ ಹೊಂದಿದ್ದರು. ಖಾನಾಪುರ ಎಸ್.ಎಚ್. ಗ್ರಾಮದಿಂದ ಮೊದಲ ಬಾರಿಗೆ ಮಂಡಲ ಪಂಚಾಯಿತಿ ಅಧ್ಯಕ್ಷರಾಗುವ ಮೂಲಕ ರಾಜಕೀಯಕ್ಕೆ ಪದಾರ್ಪಣೆ ಮಾಡಿದ್ದ ಅವರು, ಇದೇ ಕ್ಷೇತ್ರದಿಂದ ಜಿಪಂ ಸದಸ್ಯರಾಗಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದರು. 1996ರಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯಥರ್ಿಯಾಗಿ ಸ್ಪಧರ್ಿಸಿ ಸಂಸತ್ಗೆ ಪ್ರವೇಶಿಸಿದ್ದರು.

    ಸುರಪುರ ಕ್ಷೇತ್ರದ ಮೇಲೆ ತಮ್ಮ ಹಿಡಿತ ಹೊಂದಿದ್ದ ಅವರು, ರಾಜಕೀಯ ತಂತ್ರಗಾರಿಕೆ ಹೆಣೆಯುವಲ್ಲಿ ಸಿದ್ಧಹಸ್ತರಾಗಿದ್ದರು. ಮುಷ್ಠಳ್ಳಿ ಗ್ರಾಮದಲ್ಲಿರುವ ಸ್ವಂತ ತೋಟದಲ್ಲಿ ಸೋಮವಾರ ಸಂಜೆ ಅಂತ್ಯಕ್ರಿಯೆ ನೆರವೇರಿತು.

    ಮಾಜಿ ಪ್ರಧಾನಿ ದೇವೇಗೌಡ ಶೋಕ
    ಮಾಜಿ ಸಂಸದ ರಾಜಾ ರಂಗಪ್ಪ ನಾಯಕ ನಿಧನದ ಸುದ್ದಿ ತಿಳಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಟ್ವಿಟರ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ರಂಗಪ್ಪ ನಾಯಕ ಅಗಲಿಕೆ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಮೌಲ್ಯಾಧಾರಿತ ರಾಜಕಾರಣಿಯಾಗಿದ್ದ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಕುಟುಂಬ ವರ್ಗ ಮತ್ತು ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts