ಖೋ ಖೋ ಪಂದ್ಯಾಟದಲ್ಲಿ ಆಳ್ವಾಸ್‌ಗೆ ಪ್ರಶಸ್ತಿ

kho-kho
Published on

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಆಳ್ವಾಸ್ ಪಿಯು ಕಾಲೇಜು ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ನಡೆದ ಮೂಡುಬಿದಿರೆ ತಾಲೂಕುಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜು ತಂಡ ಮಹಾವೀರ ಪಿಯು ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿ ಪಡೆಯಿತು.

ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ತಂಡ ಮಹಾವೀರ ಪದವಿಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿ ಪಡೆಯಿತು.

ಸಮಾರೋಪದಲ್ಲಿ ಬಿ.ಪಿ.ಎಡ್ ಕಾಲೇಜಿನ ಪ್ರಾಂಶುಪಾಲ ಡಾ.ಮಧು ಎಂ.ಜಿ., ತರಬೇತುದಾರರಾದ ಪ್ರದೀಪ್, ರವಿ, ಅಕ್ಷಿತ್ ಶೆಟ್ಟಿ, ದೈಹಿಕ ಶಿಕ್ಷಣ ಉಪನ್ಯಾಸಕರಾದ ನವೀನ್ ರೈ ಮತ್ತು ಹರ್ಷಿತಾ ಶೆಟ್ಟಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net