ಹಾವೇರಿಯಲ್ಲಿ ಆಂಬುಲೆನ್ಸ್​​ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದ ಬಳಿ ಮಹಿಳೆಯೊಬ್ಬರು ಆಂಬುಲೆನ್ಸ್​​ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಲಕ್ಷ್ಮೀ ಯಳವತ್ತಿ, ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ. ಸೋಮವಾರ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ವೇಳೆ ಕುಟುಂಬಸ್ಥರು ಆಂಬುಲೆನ್ಸ್​​ಗೆ ಕರೆ ಮಾಡಿದ್ದಾರೆ. ತಡಸ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹುಬ್ಬಳ್ಳಿಗೆ ಕರೆದೊಯ್ಯುವಾಗ ಸಹಜ ಹೆರಿಗೆಯಾಗಿದೆ.

ಆಂಬುಲೆನ್ಸ್​ನಲ್ಲಿಯೇ ಸಿಬ್ಬಂದಿ ಕೃಷ ನಾಯಕ ಎಂಬುವರು ಸುರಕ್ಷಿತವಾಗಿ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ತಾಯಿ ಮಕ್ಕಳು ಆರೋಗ್ಯವಾಗಿದ್ದು, ಕಿಮ್ಸ್​​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​​)

Leave a Reply

Your email address will not be published. Required fields are marked *