ಸೇನೆ-ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ, ಇಬ್ಬರು ಯೋಧರಿಗೆ ಗಾಯ

Army
Published on

ಶ್ರೀನಗರ: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಜೌರಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ನಂತರ ಸೋಮವಾರ ಸಂಜೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉಗ್ರರು ರಜೌರಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಅಡಗಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು  ಕಲಕೋಟೆ ಪ್ರದೇಶದಲ್ಲಿ ಬ್ರೋಹ್ ಮತ್ತು ಸೂಮ್ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸುವ ವೇಳೆ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಉಗ್ರರು ಸೈನಿಕರ ಮೇಲೆ ಗುಂಡು ಹಾರಿಸಿದ್ದಾರೆ. ಇದರ ಪ್ರತೀಕಾರವಾಗಿ ಗುಂಡಿನ ದಾಳಿ ನಡೆದಿದೆ.

ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net