ಮಂಗಳೂರು ಗಾಂಜಾ ಸೇವನೆ ಇಬ್ಬರ ಬಂಧನ

arrested
Published on

ಮಂಗಳೂರು: ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ, ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ 2.45ರ ವೇಳೆಗೆ ಕಡೆಕಾರ್ ನೇತ್ರಾವತಿ ನದಿ ಸೇತುವೆ ಕೆಳಗಡೆ ಖಾಲಿ ಸ್ಥಳದಲ್ಲಿ ಯುವಕನೊಬ್ಬ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ಪಿಎಸ್‌ಐ ಶಿವಕುಮಾರ್ ಅವರಿಗೆ ಮಾಹಿತಿ ಬಂದಿದೆ. ತತ್ ಕ್ಷಣ ಸಿಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಆರೋಪಿಯ ಅಬ್ದುಲ್ ಮುನಾಜ್ (29) ಎಂಬಾತನನ್ನು ಬಂಧಿಸಿದ್ದಾರೆ. ವಿಚಾರಣೆ ನಡೆಸಿದಾಗ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ.

ಇನ್ನೊಂದು ಪ್ರಕರಣದಲ್ಲಿ ಖಚಿತ ಮಾಹಿತಿಯಂತೆ ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪಿ ಮಹಮ್ಮದ್ ನಿಝಾಮುದ್ದೀನ್ (30) ಎಂಬಾತನನ್ನು ಸಂಜೆ 6 ಗಂಟೆಗೆ ಬಂಧಿಸಿದ್ದಾರೆ. ವಿಚಾರಣೆ ವೇಳೆ ಗಾಂಜಾ ಸೇವಿಸಿರುವುದನ್ನು ಒಪ್ಪಿಕೊಂಡಿದ್ದಾನೆ.

ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಾಗ ಇಬ್ಬರೂ ಗಾಂಜಾ ಸೇವನೆ ಮಾಡಿರುವುದು ದೃಢ ಪಟ್ಟಿದೆ. ಆರೋಪಿಗಳ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net