More

  ಪಬ್​ನಲ್ಲಿ ಪಾಕಿಸ್ತಾನ ಪರ ಘೋಷಣೆ; ಇಬ್ಬರು ಅರೆಸ್ಟ್​

  ಬೆಂಗಳೂರು: ಶುಕ್ರವಾರ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ ನಾಲ್ಕನೇ ಟಿ-20 ಪಂದ್ಯದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಜೆಪಿ ನಗರ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

  ಬಂಧಿತರನ್ನು ಇನಾಯತ್​ವುಲ್ಲಾ ಖಾನ್ ಹಾಗೂ ಸೈಯದ್ ಮುಬಾರಕ್ ಎಂದು ಗುರುತಿಸಲಾಗಿದ್ದು, ಪಬ್​ ಒಂದರಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಪಂದ್ಯ ವೀಕ್ಷಿಸುವ ವೇಳೆ ಇಬ್ಬರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದರು ಎಂದು ತಿಳಿದು ಬಂದಿದೆ.

  ಇದನ್ನೂ ಓದಿ: ಸರ್ಕಾರ ಎಲ್ಲಾ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ಧ, ಪ್ರತಿಪಕ್ಷಗಳು ಅನುಕೂಲಕರ ವಾತಾವರಣ ಖಾತ್ರಿಪಡಿಸಬೇಕು: ಪ್ರಲ್ಹಾದ್ ಜೋಶಿ

  ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಜೆಪಿ ನಗರ ಎರಡನೇ ಹಂತದಲ್ಲಿರುವ ಮೊಹಾಲಿಕಾ ಪಬ್​ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ-20 ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇತರರು ಕೂಡಲೇ ಪೊಲೀಸರಿಗೆ ವಿಚಾರವನ್ನು ತಿಳಿಸಿದ್ದಾರೆ.

  ಆರೋಪಿಗಳಿಬ್ಬರು ಕುಡಿದ ಮತ್ತಿನಲ್ಲಿ ಈ ರೀತಿಯ ಕೆಲಸ ಮಾಡಿದ್ದು, ಪಬ್​ನ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಚಾರಣೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts