ಬೆಳ್ತಂಗಡಿ: ತಾಲೂಕಿನ ಮದ್ದಡ್ಕದ ಲಾಡಿ ಎಂಬಲ್ಲಿ ವಿಪರೀತ ಜ್ವರದಿಂದ ಸಹೋದರರಾದ ಇಬ್ಬರು ಮಕ್ಕಳು 24 ಗಂಟೆಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ.
ಸಫ್ವಾನ್(8) ಮತ್ತು ಸಿನಾನ್(4) ಮೃತ ಮಕ್ಕಳು. ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮಕ್ಕಳಿಗೆ ಮನೆಯಲ್ಲೇ ಮದ್ದು ನೀಡುತ್ತಿದ್ದು, ಎಷ್ಟೇ ಔಷಧ ಕೊಟ್ಟರೂ ಜ್ವರ ಕಡಿಮೆಯಾಗಿರಲಿಲ್ಲ. ಜ್ವರ ಉಲ್ಬಣಗೊಂಡ ಬಳಿಕ ಮಂಗಳೂರು ಆಸ್ಪತ್ರೆಗೆ ಕರೆತರಲಾಗಿದೆ. ಓರ್ವ ಬಾಲಕ ಸೋಮವಾರ ಮಧ್ಯಾಹ್ನ ಮೃತಪಟ್ಟರೆ ಇನ್ನೋರ್ವ ಬಾಲಕ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾನೆ. ಮನೆಯ ಇಬ್ಬರೂ ಮಕ್ಕಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.