Saturday, 17th November 2018  

Vijayavani

ಮೈಸೂರು ಪಾಲಿಕೆಯಲ್ಲಿ ದೋಸ್ತಿ ತಂತ್ರ - ಮಾತುಕತೆ ಯಶಸ್ವಿ - 2 ವರ್ಷ ಕಾಂಗ್ರೆಸ್, 3 ವರ್ಷ ಜೆಡಿಎಸ್​​ಗೆ        ಮೀಸಲಾತಿ ವಿಚಾರದಲ್ಲಿ ದೋಸ್ತಿಗಳೇ ಗರಂ - ಸಿಎಂ ಎಚ್​​ಡಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ        ಅನಂತ್ ನಿಧನದಿಂದಾಗಿರೋ ನಷ್ಟ ಭರಿಸಲು ಸರ್ಕಸ್ - ರಾಜ್ಯ ಬಿಜೆಪಿ ಸಂಸದರಿಗೆ ಸಿಗುತ್ತಾ ಸಚಿವ ಭಾಗ್ಯ        ಇಂದು ಮಹದಾಯಿ ಕುರಿತು ಸರ್ವಪಕ್ಷ ಸಭೆ - ಮುಂದಿನ ಕ್ರಮದ ಬಗ್ಗೆ ನಡೆಯಲಿದೆ ಮಹತ್ವದ ಚರ್ಚೆ        ಇಂದು ಶಬರಿಮಲೆ ಬಾಗಿಲು ಮತ್ತೆ ಓಪನ್ - ಮಹಿಳೆಯರಿಗೆ ದರ್ಶನ ಸಿಗುತ್ತೋ? ಸಿಗಲ್ವೋ..?       
Breaking News

ಆಟವಾಡುತ್ತಿದ್ದ ಮಕ್ಕಳ ಮೇಲೆ ದುಷ್ಕರ್ಮಿಗಳಿಂದ ಆ್ಯಸಿಡ್ ದಾಳಿ

Tuesday, 13.02.2018, 6:06 PM       No Comments

ತುಮಕೂರು: ಪಾರ್ಕ್‌ನಲ್ಲಿ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಆ್ಯಸಿಡ್ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ದರ್ಶನ್(10), ವಿನಯ್(4) ಗಾಯಗೊಂಡ ಮಕ್ಕಳು. ತಿಪಟೂರು ಪಟ್ಟಣದ ನಿವಾಸಿ ಆನಂದ್‌ ಎಂಬವರ ಮಕ್ಕಳು ಮನೆಯ ಸಮೀಪದ ಪಾರ್ಕ್​​​ನಲ್ಲಿ ಬೆಳಗ್ಗೆ ಆಟವಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಕಿಡಿಗೇಡಿ ಪುಂಡ ಹುಡುಗರ ಗುಂಪು ಮಕ್ಕಳ ಮೇಲೆ ಆ್ಯಸಿಡ್ ದಾಳಿ ನಡೆಸಿದೆ.

ದಾಳಿಯಿಂದ ಮಕ್ಕಳ ಮುಖ, ತಲೆಗೆ ಗಾಯವಾಗಿದ್ದು, ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಿಪಟೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ . (ದಿಗ್ವಿಜಯ ನ್ಯೂಸ್‌)

Leave a Reply

Your email address will not be published. Required fields are marked *

Back To Top