ಸರ್ಕಾರಿ ಕಟ್ಟಡದ ಬೇಸ್​ಮೆಂಟ್​ನಲ್ಲಿ 2 ಕೋಟಿ ರೂ.ಗೂ ಅಧಿಕ ಹಣ, ಚಿನ್ನದ ಬಿಸ್ಕೆಟ್​ ಪತ್ತೆ!

Gold biscuits
Published on

ಜೈಪುರ: ಸರ್ಕಾರಿ ಕಚೇರಿ ಕಟ್ಟಡವೊಂದರ ಬೇಸ್​ಮೆಂಟ್​ನಲ್ಲಿ ಬರೋಬ್ಬರಿ 2.1 ಕೋಟಿ ರೂಪಾಯಿಗೂ ಅಧಿಕ ನಗದು ಮತ್ತು 1 ಕೆಜಿ ಚಿನ್ನದ ಬಿಸ್ಕೆಟ್​ ಪತ್ತೆಯಾಗಿರುವುದು ಅಧಿಕಾರಿಗಳನ್ನು ಹುಬ್ಬೇರಿಸುವಂತೆ ಮಾಡಿದೆ.

ಈ ಘಟನೆ ರಾಜಸ್ಥಾನ ರಾಜಧಾನಿ ಜೈಪುರದಲ್ಲಿ ನಡೆದಿದೆ. ಯೋಜನಾ ಭವನದ ಬೇಸ್​ಮೆಂಟ್​ನ ಕಪಾಟಿನಲ್ಲಿ ಅಪಾರ ಪ್ರಮಾಣದ ಸಂಪತ್ತು ಪತ್ತೆಯಾಗಿದೆ.​ ಇದೇ ಕಟ್ಟಡದಲ್ಲಿ ಆದಾಯ ತೆರಿಗೆ ಇಲಾಖೆ ಸಹ ಕಾರ್ಯನಿರ್ವಹಿಸುತ್ತಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ರಾಜಸ್ಥಾನ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕಟ್ಟಡದಲ್ಲಿ ಹಣ ಮತ್ತು ಚಿನ್ನ ಪತ್ತೆಯಾಗಿದೆ ಎಂದು ಐಟಿ ಇಲಾಖೆಯ ಹೆಚ್ಚುವರಿ ನಿರ್ದೇಶಕರೇ ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಜೈಪುರದ ಪೊಲೀಸ್​ ಆಯುಕ್ತ ಆನಂದ್​ ಶ್ರೀವಾಸ್ತವ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸದ್ಯ ಈ ಪ್ರಕರಣ ಸಂಬಂಧ 8 ಮಂದಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪೊಲೀಸರು ಪರಿಶೀಲಿಸುತ್ತಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net