ನೂತನ ಜವಳಿ ನೀತಿ ಅಡಿ ಎರಡು ದಿನ ಉದ್ಯಮ ಶೀಲತಾ ತರಬೇತಿ

ಮೈಸೂರು: ಕೈಮಗ್ಗ ಮತ್ತು ಜವಳಿ ಇಲಾಖೆ, ಮೈಸೂರು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡ ಉದ್ಯಮಿದಾರರ ಸಂಘದಿಂದ ನೂತನ ಜವಳಿ ನೀತಿ ಅಡಿ ಎರಡು ದಿನ‌ ಉದ್ಯಮಶೀಲರಾ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ಜನಾರ್ದನ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಚ್.ಡಿ.ಕೋಟೆಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೆ.20ರಂದು ಆಯೋಜಿಸಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ‌ ವಿ.ಸೋಮಣ್ಣ ಉದ್ಘಾಟಿಸಲಿದ್ದು, ಶಾಸಕ ಸಿ.ಅನಿಲ್ ಕುಮಾರ್ ಅಧ್ಯಕ್ಷತೆ‌ ವಹಿಸಲಿದ್ದಾರೆ. ಇತರೆ ಜನಪ್ರತಿನಿಧಿಗಳು ಅಧಿಕಾರಿಗಳು, ಉದ್ಯಮಿದಾರರು ಭಾಗವಹಿಸುವರು ಎಂದು ತಿಳಿಸಿದರು.

ಕೈಮಗ್ಗ ಮತ್ತು ಜವಳಿ ಇಲಾಖೆಯ ಪ್ರವರ್ಧನಾಧಿಕಾರಿ ಬಿ.ಎಂ.ಒಡೆಯರ್ ಮೈಸೂರು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡ ಉದ್ಯಮಿದಾರರಸಂಘ ಆಧ್ಯಕ್ಷ ಆರ್.ಮಂಜುನಾಥ್‌ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *