ವಿಜಯೇಂದ್ರ ಅಧಿಕಾರ ಸ್ವೀಕರಿಸುವಾಗಲೇ ಕಾಂಗ್ರೆಸ್ ಕಚೇರಿಯಲ್ಲೂ ಪಕ್ಷ ಸೇರ್ಪಡೆ! ಕೈ ಹಿಡಿಯೋರ್ಯಾರು?

BYV
Published on

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಯರಾಗಿ ಬಿ.ವೈ ವಿಜಯೇಂದ್ರ ಪದ ಗ್ರಹಣ ಸಂದರ್ಭದಲ್ಲಿಯೇ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಂಡಿದೆ.

ಜಗನ್ನಾಥ ಭವನದಲ್ಲಿ ಬಿಜೆಪಿ ನಾಯಕರ ಸಮ್ಮುಖದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಳ್ಳುವರು. ಇತ್ತ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಇಬ್ಬರು ಮಾಜಿ‌ ಶಾಸಕರು ಪಕ್ಷ ಸೇರ್ಪಡೆಯಾಗುವರು.

JDS Ex MLa

ಬಿಜೆಪಿ ತೊರೆದು ಕಾಂಗ್ರೆಸ್ ಸೇರಗಪಡೆಯಾಗಲು ಹಲವು ಮಾಜಿ ಶಾಸಕರು ಮಾತುಕತೆ ನಡೆಸಿದ್ದಾರೆ.‌ ಆದರೆ ಬುಧವಾರ ಕಾಂಗ್ರೆಸ್ ಸೇರುತ್ತಿರುವವರು ಜೆಡಿಎಸ್‌ನಿಂದ ಕಳೆದ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸೋತವರಾಗಿದ್ದಾರೆ.

ಕೆಪಿಸಿಸಿ‌ ಮೂಲಗಳ ಪ್ರಕಾರ ದಾಸರಹಳ್ಳಿ ಮಾಜಿ ಶಾಸಕ‌ ಆರ್. ಮಂಜುನಾಥ್ ಹಾಗೂ ಮಾಜಿ ಶಾಸಕರಾದ ಗೌರಿ ಶಂಕರ್ ಕಾಂಗ್ರೆಸ್ ಸೇರುತ್ತಿದ್ದಾರೆ. ಲೋಕಸಭೆ ಚುನಾವಣೆವರೆಗೂ ಪಕ್ಷ ಸೇರ್ಪಡೆ ಮುಂದುವರಿಸುವಂತೆ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ‌ಯನ್ನೂ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net