ತುಂಡಾದ ವಿದ್ಯುತ್ ತಂತಿ ತುಳಿದು ರೈತರಿಬ್ಬರ ದುರ್ಮರಣ!

Current Shock
ಪೊಲೀಸರಿಂದ ಸ್ಥಳ ಪರಿಶೀಲನೆ
Published on

ಬೆಳಗಾವಿ: ಮಳೆಗಾಲದಲ್ಲಿ ಎಷ್ಟು ಜಾಗರೂಕರಾಗಿದ್ದರೂ ಸಾಲದು. ಸ್ವಲ್ಪ ಹೆಚ್ಚು ಕಡಿಮೆಯಾದರೂ, ಎಚ್ಚರ ತಪ್ಪಿದರೂ ಪ್ರಾಣಾಪಾಯಕ್ಕೆ ಒಳಗಾಗುವ ಸಾಧ್ಯತೆಗಳು ಬಹಳಷ್ಟಿವೆ. ಅಂಥದ್ದೇ ಒಂದು ಪ್ರಕರಣದಲ್ಲಿ ರೈತರಿಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹಿರೂರ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಫಕೀರಪ್ಪ ಚಂದರಗಿ (54), ಮಹಾದೇವ ಮೇತ್ರಿ (40) ವಿದ್ಯುತ್ ತಂತಿಯ ಸ್ಪರ್ಶದಿಂದ ಸಾವಿಗೀಡಾದ ರೈತರು. ವಿದ್ಯುದಾಘಾತದಿಂದಾಗಿ ಇವರಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಇಲ್ಲಿನ ಕಬ್ಬಿನ ಗದ್ದೆಯೊಂದರಲ್ಲಿ ಕೆಲಸ ಮಾಡುವಾಗ ರೈತರಿಬ್ಬರು ಈ ದುರಂತಕ್ಕೆ ಒಳಗಾಗಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ರಾಜ್ಯದಲ್ಲಿ ಇತ್ತೀಚೆಗೆ ಈ ಥರದ ಸಾವುಗಳು ಹೆಚ್ಚಾಗಿವೆ. ಅದರಲ್ಲೂ ಮಳೆಗಾಲದಲ್ಲಿ ಸಾರ್ವಜನಿಕರು ತುಸು ಹೆಚ್ಚೇ ಎಚ್ಚರದಿಂದ ಇರುವುದು ಒಳಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net