ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯತ್​​ ತಂತಿ ಸ್ಪರ್ಶಿಸಿ ಇಬ್ಬರು ರೈತರು ಬಲಿ

ಬೆಂಗಳೂರು: ಪ್ರತ್ಯೇಕ ಪ್ರಕರಣಗಳಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯತ್​ ತಂತಿಗಳನ್ನು ತುಳಿದು ಇಬ್ಬರು ರೈತರು ದಾರುಣವಾಗಿ ಮೃತಪಟ್ಟಿದ್ದಾರೆ.


ವಿಜಯಪುರದ ಮುದ್ದೇಬಿಹಾಳ ತಾಲೂಕಿನ ಪಡೇಕನೂರು ಗ್ರಾಮದಲ್ಲಿ ಸಂಗನಗೌಡ ಬಸನಗೌಡ ಬಿರಾದಾರ (32) ಅವರು ಸಾವನಪ್ಪಿರುವ ರೈತ. ಸೋಮವಾರ ಬೆಳಗ್ಗೆ ಹೊಲಕ್ಕೆ ತೆರಳುವ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ ಹಿನ್ನೆಲೆ ರೈತ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಈ ಕುರಿತು ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮೈಸೂರಿನ ಟಿ.ನರಸೀಪುರ ತಾಲೂಕಿನ ಎಳೆಗೌಡನಹುಂಡಿ ಗ್ರಾಮದ ರೈತ ಗವಿಗೌಡ (50) ವಿದ್ಯುತ್​ ತಂತಿ ತಗುಲಿ ಮೃತಪಟ್ಟಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಸ್ಥಳದಲ್ಲಿಯೇ ಮೃತರಾಗಿದ್ದಾರೆ. ಈ ಕುರಿತು ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)