More

    ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡದ ಇಬ್ಬರು

    ಧಾರವಾಡ: ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯವು ಬಿಡುಗಡೆ ಮಾಡಿರುವ ವಿಶ್ವದ ಟಾಪ್ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ವಿಜ್ಞಾನಿಗಳಾದ ಡಾ. ಎಸ್. ಬಸವರಾಜಪ್ಪ ಮತ್ತು ಡಾ. ಅಮರನಾಥ ಹೆಗಡೆ ಸ್ಥಾನ ಪಡೆದಿದ್ದಾರೆ.
    ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯ ಮತ್ತು ಎಲ್ಸೆವಿಯ ಪಬ್ಲಿಕೇಶನ್ ಸಹಯೋಗದೊಂದಿಗೆ ವಿಶ್ವದ ಅಗ್ರ ಶೇ. 2ರಷ್ಟು ವಿಜ್ಞಾನಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸಂಶೋಧನೆ, ಸಂಶೋಧನಾ ವರದಿ, ಸಂಶೋಧನಾ ಉಲ್ಲೇಖಗಳು, ಲೇಖನಗಳನ್ನು ಒಳಗೊಂಡ ಎಚ್ ಇಂಡೆಕ್ಸ್, ಐ ಟೆನ್ ಇಂಡೆಕ್ಸ್ ಸೇರಿ ವಿವಿಧ ಮಾನದಂಡ ಮತ್ತು ಇತರ ಸಂಯೋಜಿತ ಗ್ರಂಥಮಾಪಕ ಅಂಕಿಸ೦ಖ್ಯೆ ಆಧರಿಸಿ ಪಟ್ಟಿ ಸಿದ್ಧಪಡಿಸಲಾಗಿದೆ.
    ಡಾ. ಎಸ್. ಬಸವರಾಜಪ್ಪ ಅವರು ಐಐಟಿಯ ರಿಜಿಸ್ಟಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು 129 ಸಂಶೋಧನಾ ಲೇಖನ ಪ್ರಕಟಿಸಿದ್ದಾರೆ. ಯಾಂತ್ರಿಕ ಮತ್ತು ಸಾರಿಗೆ ಇಂಜಿನಿಯರಿ೦ಗ್ ವಿಷಯಗಳು ಅವರ ಸಂಶೋಧನಾ ಕ್ಷೇತ್ರಗಳಾಗಿವೆ.
    ಡಾ. ಅಮರನಾಥ ಹೆಗಡೆ ಐಐಟಿಯ ಸಿವಿಲ್ ಮತ್ತು ಇನ್‌ಫ್ರಾಸ್ಟಕ್ಚರ್ ಇಂಜಿನಿಯರಿ೦ಗ್ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿದ್ದಾರೆ. ಅವರು 46 ಸಂಶೋಧನಾ ಲೇಖನ ಪ್ರಕಟಿಸಿದ್ದಾರೆ. ಜಿಯೋಟೆಕ್ನಿಕಲ್ ಇಂಜಿನಿಯರಿ೦ಗ್, ಜಿಯೋಸಿಂಥೆಟಿಕ್ ಮತ್ತು ಗ್ರೌಂಡ್ ಇಂಪ್ರೂಮೆ೦ಟ್ಸ್ ವಿಷಯಗಳು ಅವರ ಅಧ್ಯಯನ ಆಸಕ್ತಿಯ ಕ್ಷೇತ್ರಗಳಾಗಿವೆ.
    ಇಬ್ಬರೂ ವಿಜ್ಞಾನಿಗಳನ್ನು ಐಐಟಿ ನಿರ್ದೇಶಕ ಪ್ರೊ. ವೆಂಕಪ್ಪಯ್ಯ ದೇಸಾಯಿ, ಪ್ರಾಧ್ಯಾಪಕರು, ಸಿಬ್ಬಂದಿ ಅಭಿನಂದಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts