

ಹಾವೇರಿ: ನದಿಯ ನೀರಿನ ರಭಸಕ್ಕೆ ಹುಡುಗಿಯರಿಬ್ಬರು ಕೊಚ್ಚಿ ಹೋಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಹಿರೇಬಿದರಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಹಿರೇಕೆರೂರು ತಾಲೂಕಿನ ಅಬಲೂರು ಗ್ರಾಮದ ನಿವಾಸಿ ಕೀರ್ತಿ ಇಂಗಳಗುಂದಿ (17) ಹಾಗೂ ಕಾಟೇನಹಳ್ಳಿ ಗ್ರಾಮದ ನಿವಾಸಿ ಅಭಿಲಾಷಾ ಹಲಗೇರಿ (19) ಮೃತ ದುರ್ದೈವಿಗಳು.
ಶನಿವಾರ ತಮ್ಮ ಮಾವನ ಜತೆ ಕಾರು ತೊಳೆಯಲು ನದಿಗೆ ಹೋದಾಗ ಕಾಲು ಜಾರಿ ನದಿಗೆ ಬಿದ್ದು ದುರ್ಘಟನೆ ಸಂಭವಿಸಿದೆ. ಮುಳುಗು ತಜ್ಞರ ಸಾಕಷ್ಟು ಹುಡುಕಾಟದ ಬಳಿಕ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮಕ್ಕಳನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)