ಗುಂಡ್ಲುಪೇಟೆ: ತಾಲೂಕಿನ ಬೆಟ್ಟದಮಾದಹಳ್ಳಿ ಗ್ರಾಮದ ಬಿಎಸ್‌ಸಿ ವಿದ್ಯಾರ್ಥಿನಿ ಭ್ರಮರಾಂಬಿಕೆ ಮೈಸೂರು ವಿಶ್ವವಿದ್ಯಾಲಯದ 150ನೇ ಘಟಿಕೋತ್ಸವದಲ್ಲಿ ಭೌತಶಾಸ್ತ್ರ ವಿಭಾಗದಲ್ಲಿ ಎರಡು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನ ಪಡೆದುಕೊಂಡರು.
ತಾಲೂಕಿನ ಬೇಗೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಓದಿದ್ದ ಭ್ರಮರಾಂಬಿಕೆ ಸದ್ಯ ನಂಜನಗೂಡು ಜೆಎಸ್‌ಎಸ್ ಕಾಲೇಜಿನಲ್ಲಿ ಬಿಎಸ್‌ಸಿ ಪದವಿಯಲ್ಲಿ ಭೌತಶಾಸ್ತ್ರ ವಿಷಯದಲ್ಲಿ 1200 ಅಂಕಗಳಿಗೆ 1195 ಅಂಕಗಳನ್ನು ಗಳಿಸಿ ಟಾಪರ್ ಆಗಿ ಹೊರಹೊಮ್ಮುವ ಮೂಲಕ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.