ಆಂಗ್ಲರ ವಿರುದ್ಧದ ಅಂತಿಮ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರಿಗೆ ವಿಶ್ರಾಂತಿ?

Team India
Published on

ನವದೆಹಲಿ: ಪ್ರವಾಸಿ ಇಂಗ್ಲೆಂಡ್​ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಅತಿಥೇಯರು ಮೇಲುಗೈ ಸಾಧಿಸಿದ್ದು, ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆಯೇ ವಶಪಡಿಸಿಕೊಂಡಿದ್ದಾರೆ. ಇನ್ನು ಸರಣಿಯ ಐದನೇ ಪಂದ್ಯ ಮಾರ್ಚ್​ 07ರಂದು ಧರ್ಮಾಶಾಲಾದಲ್ಲಿ ಆರಂಭವಾಗಲಿದ್ದು, ಟೀಮ್​ ಮ್ಯಾನೇಜ್​ಮೆಂಟ್​ ಪ್ರಮುಖ ನಿರ್ಧಾರ ಒಂದನ್ನು ತೆಗೆದುಕೊಳ್ಳಲಿದೆ ಎಂದು ತಿಳಿದು ಬಂದಿದೆ.

ಧರ್ಮಾಶಾಲಾದಲ್ಲಿ ನಡೆಯಲಿರುವ ಐದನೇ ಟೆಸ್ಟ್​ ಪಂದ್ಯದಲ್ಲಿ ತಂಡದ ಇಬ್ಬರು ಪ್ರಮುಖ ಆಟಗಾರರಿಗೆ ರೆಸ್ಟ್​ ನೀಡಲು ಟೀಂ ಇಂಡಿಯಾ ಮ್ಯಾನೇಜ್​​ಮೆಂಟ್​ ನಿರ್ಧರಿಸಿದ್ದು, ಮುಂಬರುವ ಐಪಿಎಲ್​ ಹಾಗೂ ಟಿ-20 ವಿಶ್ವಕಪ್​ ಹಿನ್ನಲೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಆದರೆ ಯಾವೆಲ್ಲಾ ಆಟಗಾರರಿಗೆ ರೆಸ್ಟ್​ ನೀಡಲಾಗುತ್ತದೆ ಎಂದು ಈವರೆಗೆ ತಿಳಿದು ಬಂದಿಲ್ಲ.

ಸುದ್ದಿ ಮೂಲಗಳ ಪ್ರಕಾರ ವೇಗಿ ಜಸ್ಪ್ರೀತ್​ ಬುಮ್ರಾ ತಂಡಕ್ಕೆ ವಾಪಸ್​ ಆಗಲಿದ್ದು, ಇವರ ಬದಲಿಗೆ ವೇಗಿ ಒಬ್ಬರು ತಂಡದಿಂದ ಹೊರಗುಳಿಯಲಿದ್ದಾರೆ. ಉಳಿದಂತೆ ವಿಕೆಟ್​ ಕೀಪರ್​, ಬ್ಯಾಟ್ಸ್​ಮನ್​ ಕೆ.ಎಲ್. ರಾಹುಲ್​ ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರು ಅಂತಿಮ ಟೆಸ್ಟ್​ ಪಂದ್ಯ ತಪ್ಪಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಕ್ವಾಡ್ರೈಸ್ಪ್ಸ್​​ನಿಂದ ಬಳಲುತ್ತಿರುವ ರಾಹುಲ್​ ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಬಿಸಿಸಿಐ ತಜ್ಞರ ಅಭಿಪ್ರಾಯಕ್ಕಾಗಿ ಲಂಡನ್‌ಗೆ ಕಳುಹಿಸಿದೆ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net