ಪೆನ್ಸಿಲ್ವೇನಿಯಾದ ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಇಬ್ಬರು ಭಾರತೀಯ ವಿದ್ಯಾರ್ಥಿಗಳು | Pennsylvania

Pennsylvania

Pennsylvania: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಶನಿವಾರ (ಮೇ.10) ಪೆನ್ಸಿಲ್ವೇನಿಯಾದಲ್ಲಿ ನಡೆದಿದೆ.

blank

ಕಾರು ಮರಕ್ಕೆ ಡಿಕ್ಕಿ ಹೊಡೆದ ನಂತರ ಸೇತುವೆಗೆ ಡಿಕ್ಕಿ ಹೊಡೆದಿದೆ ಇದರ ಪರಿಣಾಮ ಈ ದುರಂತ ಸಂಭವಿಸಿದೆ. ಕಾರಿನ ಮುಂಬಾಗದಲ್ಲಿ ಕುಳಿತಿದ್ದ ಮತ್ತೊಬ್ಬ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಟತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಟೆಸ್ಟ್​ ಕ್ರಿಕೆಟ್​ಗೆ ಕೊಹ್ಲಿ ವಿದಾಯ: 12 ವರ್ಷದ ಹಿಂದಿನ ಮನಕಲಕುವ ಘಟನೆ ನೆನೆದ ಸಚಿನ್ ತೆಂಡೂಲ್ಕರ್​!​ Virat Kohli

ಮಾನವ್ ಪಟೇಲ್ ಮತ್ತು ಸೌರವ್ ಪ್ರಭಾಕರ್ ಎಂಬ ಇಬ್ಬರು ಭಾರತೀಯ ವಿದ್ಯಾರ್ಥಿಗಳ ದುರಂತ ಸಾವಿನ ಬಗ್ಗೆ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ತೀವ್ರ ದುಃಖ ವ್ಯಕ್ತಪಡಿಸಿದೆ. ಕಾನ್ಸುಲೇಟ್ ಮೃತ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿದೆ ಮತ್ತು ಈ ಕಷ್ಟದ ಸಮಯದಲ್ಲಿ ಬೆಂಬಲವನ್ನು ನೀಡುತ್ತದೆ ಎಂದು X ನಲ್ಲಿ ಪೋಸ್ಟ್ ಮಾಡಿದೆ.

“ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯ ಇಬ್ಬರು ಭಾರತೀಯ ವಿದ್ಯಾರ್ಥಿಗಳಾದ ಮಾನವ್ ಪಟೇಲ್ (20) ಮತ್ತು ಸೌರವ್ ಪ್ರಭಾಕರ್ (23) ಪ್ರಾಣ ಕಳೆದುಕೊಂಡ ದುರದೃಷ್ಟಕರ ರಸ್ತೆ ಅಪಘಾತದ ಬಗ್ಗೆ ತಿಳಿದು ತೀವ್ರ ದುಃಖವಾಯಿತು” ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಸೋಮವಾರ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಸೌರವ್ ಪ್ರಭಾಕರ್ ಕಾರನ್ನು ಚಲಾಯಿಸುತ್ತಿದ್ದನು ನಂತರ  ನಿಯಂತ್ರಣ ತಪ್ಪಿ , ರಸ್ತೆಯಿಂದ ಕೆಳಗಿಳಿದು ಮರಕ್ಕೆ ಡಿಕ್ಕಿ ಹೊಡೆದು ಸೇತುವೆಗೆ ಡಿಕ್ಕಿ ಹೊಡೆದಿದೆ. ಬಹು ಆಘಾತಕಾರಿ ಗಾಯಗಳಿಂದಾಗಿ ಇಬ್ಬರೂ ಯುವಕರು ಸ್ಥಳದಲ್ಲೇ ಸಾವನ್ನಪ್ಪಿದರು. ಎರಡೂ ಸಾವುಗಳು ಆಕಸ್ಮಿಕ ಎಂದು ತೀರ್ಮಾನಿಸಲಾಗಿದೆ ಎಂದು ಪೆನ್ಸಿಲ್ವೇನಿಯಾದ ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)

ಪಾಕ್​​ ದಾಳಿಯಲ್ಲಿ ಅವಳಿ ಮಕ್ಕಳು ಬಲಿ, ತಂದೆ ಸಾವು ಬದುಕಿನ ನಡುವೆ ಹೋರಾಟ, ಇಡೀ ಕುಟುಂಬವೇ ನಾಶ | Kashmir

Share This Article
blank

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

ಆಹಾರ ಸೇವಿಸುವಾಗ ಪದೇಪದೆ ಕೂದಲು ಕಾಣಿಸುತ್ತಿದಿಯೇ?: ಹಾಗಾದ್ರೆ ಸ್ವಲ್ಪ ಜಾಗರೂಕರಾಗಿ.. ಜ್ಯೋತಿಷ್ಯದಲ್ಲಿ ಹೇಳೋದೇನು? | Eating

Eating: ನಿಮ್ಮ ಆಹಾರದಲ್ಲಿ ಕೂದಲು ಮತ್ತೆ ಮತ್ತೆ ಬರುವುದು. ನಿಮ್ಮ ಆಹಾರದಲ್ಲಿ ಕೂದಲು ಉದುರುವ ಘಟನೆ…

blank